JDS Karnataka

JDS Karnataka JDS Karnataka

10/02/2024

ಶಿಕ್ಷಕ ಬಂಧುಗಳೇ..ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ ರಂಗನಾಥ ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ.

ಕನ್ನಡದ ನವೋದಯ ಕವಿಗಳಲ್ಲಿ ಪ್ರಮುಖರು, ರಾಷ್ಟ್ರಕವಿಗಳಾದ ಡಾ.ಜಿ.ಎಸ್.ಶಿವರುದ್ರಪ್ಪ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು. ವಿಮರ್ಶೆ,...
07/02/2024

ಕನ್ನಡದ ನವೋದಯ ಕವಿಗಳಲ್ಲಿ ಪ್ರಮುಖರು, ರಾಷ್ಟ್ರಕವಿಗಳಾದ ಡಾ.ಜಿ.ಎಸ್.ಶಿವರುದ್ರಪ್ಪ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು.
ವಿಮರ್ಶೆ, ಮೀಮಾಂಸೆ, ಅಧ್ಯಯನ, ಅಧ್ಯಾಪನ, ಆಡಳಿತ, ಸಂಘಟನೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡು ಕನ್ನಡ ನಾಡುನುಡಿಗೆ ಅನನ್ಯ ಕೊಡುಗೆ ನೀಡಿದ ಜಿಎಸ್‌ಎಸ್‌ ಅವರನ್ನು ಸ್ಮರಿಸೋಣ.
#ಜಿಎಸ್‌ಎಸ್

07/02/2024

ಕಾವೇರಿಗಾಗಿ ದೇವೇಗೌಡರ ಧ್ವನಿಗೆ.... ಸಹಮತ ವ್ಯಕ್ತಪಡಿಸಿದ ರಾಜ್ಯಸಭಾ ಸದಸ್ಯರಾದ ಜಗ್ಗೇಶ್ ರವರು.

ದಿಲ್ಲಿ ಚಲೋ.... ಮಾಡೋ ಮೊದ್ಲು... ಬ್ರಾಂಡ್ ಬೆಂಗಳೂರು ಕಥೆ ಏನಾಗಿದೆ ನೋಡಪ್ಪ ಶಿವಕುಮಾರ..!!
06/02/2024

ದಿಲ್ಲಿ ಚಲೋ.... ಮಾಡೋ ಮೊದ್ಲು... ಬ್ರಾಂಡ್ ಬೆಂಗಳೂರು ಕಥೆ ಏನಾಗಿದೆ ನೋಡಪ್ಪ ಶಿವಕುಮಾರ..!!

ಇಷ್ಟೇ.... ಇಷ್ಟೇ....!!
06/02/2024

ಇಷ್ಟೇ.... ಇಷ್ಟೇ....!!

06/02/2024
06/02/2024
ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ 'ಭಾರತರತ್ನ' ಗೌರವಕ್ಕೆ ಪಾತ್ರರಾಗಿರುವ ಹಿರಿಯ ರಾಜಕಾರಣಿ, ಮುತ್ಸದ್ಧಿ, ಬಿಜೆಪಿ ಭೀಷ್ಮ ಹಾಗೂ ಮಾಜಿ ಉಪ ಪ್ರ...
05/02/2024

ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ 'ಭಾರತರತ್ನ' ಗೌರವಕ್ಕೆ ಪಾತ್ರರಾಗಿರುವ ಹಿರಿಯ ರಾಜಕಾರಣಿ, ಮುತ್ಸದ್ಧಿ, ಬಿಜೆಪಿ ಭೀಷ್ಮ ಹಾಗೂ ಮಾಜಿ ಉಪ ಪ್ರಧಾನಿಗಳಾದ ಶ್ರೀ ಎಲ್.ಕೆ.ಆಡ್ವಾಣಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.

ಅತ್ಯುನ್ನತ ಗೌರವಕ್ಕೆ ಅರ್ಹ ವ್ಯಕ್ತಿಯನ್ನು ಗುರುತಿಸಿ ಪುರಸ್ಕಾರ ಘೋಷಿಸಿರುವ ಕೇಂದ್ರ ಸರಕಾರ ಹಾಗೂ ಪ್ರಧಾನಿಗಳಾದ ಶ್ರೀ Narendra Modi ಅವರಿಗೆ ನನ್ನ ಅಭಿವಂದನೆಗಳು.

ಭಾರತೀಯ ರಾಜಕಾರಣದಲ್ಲಿ ನಿಷ್ಠೆ, ಬದ್ಧತೆ, ಸ್ನೇಹಶೀಲತೆ ಹಾಗೂ ಕಠಿಣ ಪರಿಶ್ರಮಕ್ಕೆ ಅನ್ವರ್ಥವಾದ ಶ್ರೀ ಆಡ್ವಾಣಿ ಅವರು ಎಲ್ಲರಿಗೂ ಪ್ರೇರಣೆ. ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ.

ಜೋಗದ ಸಿರಿ ಬೆಳಕಿನಲ್ಲಿತುಂಗೆಯ ತೆನೆ ಬಳುಕಿನಲ್ಲಿ//ಇಂತಹ ನಿತ್ಯನೂತನ ಕವಿತೆಗಳನ್ನು ರಚಿಸಿದ ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅವ...
05/02/2024

ಜೋಗದ ಸಿರಿ ಬೆಳಕಿನಲ್ಲಿ
ತುಂಗೆಯ ತೆನೆ ಬಳುಕಿನಲ್ಲಿ//
ಇಂತಹ ನಿತ್ಯನೂತನ ಕವಿತೆಗಳನ್ನು ರಚಿಸಿದ ನಿತ್ಯೋತ್ಸವ ಕವಿ ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅವರ ಜನ್ಮದಿನದಂದು ಅವರಿಗೆ ನನ್ನ ಭಾವಪೂರ್ಣ ನಮನಗಳು.
ತಮ್ಮ ಕಾವ್ಯದ ಮೂಲಕ ಕನ್ನಡನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿಯ ಸಿರಿಯನ್ನು ಉಣಬಡಿಸಿದ ನಿಸಾರರನ್ನು ಸ್ಮರಿಸೋಣ.
#ಪ್ರೊ_ಕೆಎಸ್_ನಿಸಾರ್_ಅಹಮದ್

ಅನ್ನಭಾಗ್ಯ, ಗೃಹಲಕ್ಷ್ಮೀ ಹೆಸರಿನಲ್ಲಿ ಲೋಕೋದ್ಧಾರ ಮಾಡಿದ್ದೇವೆ ಎಂದು ಸುಳ್ಳುಲೆಕ್ಕ ಕೊಟ್ಟು ಜನರ ತೆರಿಗೆ ಹಣದಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತ...
05/02/2024

ಅನ್ನಭಾಗ್ಯ, ಗೃಹಲಕ್ಷ್ಮೀ ಹೆಸರಿನಲ್ಲಿ ಲೋಕೋದ್ಧಾರ ಮಾಡಿದ್ದೇವೆ ಎಂದು ಸುಳ್ಳುಲೆಕ್ಕ ಕೊಟ್ಟು ಜನರ ತೆರಿಗೆ ಹಣದಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ನಿಮ್ಮ ಲೊಳಲೊಟ್ಟೆ ಬಯಲಾಗಿದೆ Siddaramaiah ನವರೇ. ನುಡಿದಂತೆ ನಡೆದಿದ್ದೇವೆ ಎಂದರೆ ಇದೇನಾ ಮುಖ್ಯಮಂತ್ರಿಗಳೇ?

ಗ್ಯಾರಂಟಿಗಳ ಮೂಲಕವೇ ಗತಿಗೆಟ್ಟ Indian National Congress - Karnataka ಪಕ್ಷದ ಹೊಟ್ಟೆ ಹೊರೆಯುತ್ತಿರುವ ಮತಿಗೆಟ್ಟ ನಿಮ್ಮ ಸರಕಾರವು ಕಲ್ಯಾಣ ಕಾರ್ಯಕ್ರಮಗಳ ಕಪಟ ಪೋಷಾಕಿನಿಂದ ಮೆರೆಯುತ್ತಿದೆ. ಆ ಪೋಷಾಕು, ನಿಮ್ಮ ಢೋಂಗಿಧೀರತ್ವದ ಮುಖವಾಡ ಕಳಚಿ ನೆಲಕ್ಕೆ ಬಿದ್ದಿದೆ. ಇನ್ನಾದರೂ ಎಚ್ಚೆತ್ತುಕೊಳ್ಳಿ.

ಅಧಿಕಾರದ ಮದವೇರಿ ಮಂಪರು ಬಿದ್ದಿರುವ ನಿಮ್ಮ ಕಂಗಳು ಆ ನತದೃಷ್ಟನ ಪ್ರಾಣಾರ್ಪಣೆಯಿಂದಲಾದರೂ ತೆರೆದುಕೊಳ್ಳಲಿ. ಇಲ್ಲವಾದರೆ, ಆ ಯುವಕನ ಸಾವಿನ ಶಾಪ ನಿಮಗೆ ತಟ್ಟದೇ ಬಿಡದು.
ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ? ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ? ನಾಚಿಕೆ, ಸಂಕೋಚ ಎನ್ನುವುದಿಲ್ಲವೇ? ಇದ್ದರೆ ಈ ಧಾರುಣಕ್ಕೆ ರಾಜ್ಯ ಸಾಕ್ಷಿಯಾಗುತ್ತಿತ್ತಾ?

ದುಡಿದು ತಾಯಿಯನ್ನು ಸಲಹಬೇಕೆಂದು ಕನಸು ಕಟ್ಟಿಕೊಂಡು ಹೊರಟ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಾಹುತಿ ಆಘಾತಕಾರಿ. ನಿಮ್ಮ ಪ್ರಚಾರಪ್ರಿಯ, ಖೊಟ್ಟಿ ಗ್ಯಾರಂಟಿಗಳ ಸರಕಾರದ ಆತ್ಮಸಾಕ್ಷಿಗೆ ಎದುರಾದ ದೊಡ್ಡ ಸವಾಲು.

ಟಿಕೆಟ್ ಇಲ್ಲದೆ ರೈಲಿನಿಂದ ಹೊರದಬ್ಬಿಸಿಕೊಂಡ ಈತ, ಧಾರವಾಡ ಆಳ್ನಾವರದಲ್ಲಿ ಹೆತ್ತಮ್ಮಗೆ ಅನ್ನ ಅರಸುತ್ತಾ, ದುಡಿಮೆ ಹುಡುಕುತ್ತಾ ಹೊರಟ. ಎಲ್ಲಿಯೂ ಅವಕಾಶ ಸಿಗದೆ ಕೈ ಚೆಲ್ಲಿ ನೇಣಿಗೆ ಕೊರಳು ಒಡ್ಡಿದ್ದಾನೆ. ಮೂರು ನಾಲ್ಕು ದಿನ ತಾಯಿ ಮಗ ಇಬ್ಬರೂ ಅನ್ನಕ್ಕಾಗಿ ಪರಿತಪಿಸಿದ್ದಾರೆ.

ಈ ತಾಯಿಯ ಕುಟುಂಬಕ್ಕೆ ಅನ್ನಭಾಗ್ಯ ಏಕೆ ತಲುಪಿಲ್ಲ? ಗೃಹಲಕ್ಷ್ಮೀ ಅವರ ಮನೆ ಬಾಗಿಲಿಗೆ ಹೋಗಿಲ್ಲವೇಕೆ? ಇದಕ್ಕೆ ನೀವೇ ಹೊಣೆ ಸಿದ್ದರಾಮಯ್ಯನವರೇ. 15ನೇ ಬಜೆಟ್ ಮಂಡಿಸುವ ಉಮೇದಿನಲ್ಲಿರುವ ನೀವು ಈ 'ಸತ್ತ ಸರಕಾರದ ಸಾಹುಕಾರ'ನಷ್ಟೇ. ನಿಮ್ಮ ಸೋಗಲಾಡಿ ಸಮಾಜವಾದ ಬೆತ್ತಲಾಗಿದೆ. ಅನ್ನಕ್ಕಾಗಿ ಸಂಭವಿಸಿದ ಈ ಆತ್ಮಹತ್ಯೆ ಇಡೀ ನಾಡಿಗೇ ಕಪ್ಪುಚುಕ್ಕೆ.

ವಿಜಯವಾಣಿ ಪತ್ರಿಕೆಯ ಈ ವರದಿ ನಿಮ್ಮ ಸರಕಾರ ಮತ್ತು ನಿಮ್ಮನ್ನು ಕಟಕಟೆಯಲ್ಲಿ ನಿಲ್ಲಿಸಿದೆ. ಸ್ವತಃ ನೀವೇ ಈ ಯುವಕನ ಸಾವಿಗೆ ಕಾರಣ ಮತ್ತು ನೇರ ಹೊಣೆ. ರಾಜ್ಯಕ್ಕೆ ನೀವೇ ಸಮಜಾಯಿಷಿ ಕೊಡಬೇಕು ಹಾಗೂ ಶಾಂತವ್ವನಿಗೆ ತಕ್ಷಣವೇ ಸೂಕ್ತ ಪರಿಹಾರ ಘೋಷಿಸಬೇಕು.

ಇನ್ನೊಂದು ಸಲಹೆ; ಹಳ್ಳ ಹಿಡಿದಿರುವ ನಿಮ್ಮ ಗ್ಯಾರಂಟಿಗಳನ್ನು ಸರಿದಾರಿಗೆ ತನ್ನಿ. ಅವುಗಳ ವೈಫಲ್ಯವನ್ನು ಪರಾಮರ್ಶೆ ಮಾಡಿ. ಅಧಿಕಾರಿಗಳ ಕಿವಿ ಹಿಂಡಿ ಕೆಲಸ ಮಾಡಿಸಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದ್ದರೆ ಮೊದಲು ಈ ಕೆಲಸ ಮಾಡಿ.

ಅನ್ನಕ್ಕಾಗಿ ಜೀವತೆತ್ತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಆ ತಾಯಿಯ ಆರೋಗ್ಯ ಸುಧಾರಿಸಲಿ.

05/02/2024

Address

Bangalore

Alerts

Be the first to know and let us send you an email when JDS Karnataka posts news and promotions. Your email address will not be used for any other purpose, and you can unsubscribe at any time.

Share