04/07/2026
ಜಾನಪದ ಕಲೆಗಳ ತವರೂರಾದ ಚಾಮರಾಜನಗರದಲ್ಲಿ ಇಂದು ನಡೆದ ಎಸ್‌ಸಿ/ಎಸ್‌ಟಿ ಆಯೋಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ. ಎಲ್. ಮೂರ್ತಿ ಅವರು ಭಾಗವಹಿಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ, ಶೀಘ್ರವಾಗಿ ಅವುಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.
ಜಿಲ್ಲೆಯ ಎಸ್ ಸಿ ಎಸ್ ಟಿ ಜನಾಂಗದ ಅಭಿವೃದ್ಧಿಗಾಗಿ ಮೀಸಲಾದ SCSP/TSP ಅನುದಾನವನ್ನು ಅತ್ಯಂತ ಪಾರದರ್ಶಕವಾಗಿ ಬಳಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಲಾಭ ತಲುಪಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.
ಅಲ್ಲದೇ ಜಿಲ್ಲೆಯಲ್ಲಿ ಪದೇಪದೇ ಮರುಕಳಿಸುತ್ತಿರುವ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಕ್ಷಣವೇ ಹತ್ತಿಕ್ಕಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಆಯೋಗದ ಕಾರ್ಯದರ್ಶಿಗಳು, ಸದಸ್ಯರುಗಳು, ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
At the SC/ST Commission Progress Review Meeting held today in Chamarajanagar, the land renowned for its rich folk art and cultural heritage, Dr. L. Murthy, Chairman of the Karnataka State Scheduled Castes and Scheduled Tribes Commission, participated in the meeting, heard the grievances of the public, and directed the concerned officials to ensure their prompt resolution.
He instructed officials to ensure that SCSP/TSP funds earmarked for the development of Scheduled Castes and Scheduled Tribes in the district are utilized with the highest standards of transparency and accountability, ensuring that the benefits of government welfare schemes reach all eligible beneficiaries.
Dr. Murthy also directed the district administration to take immediate and effective measures to curb the recurring incidents of atrocities against Dalits in the district and to ensure timely action in accordance with the law.
The meeting was attended by the Commission’s Secretary, Members, officials, and district administration authorities.