25/08/2026
ಬೆಂಗಳೂರಿನಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (FKCCI) ಆಯೋಜಿಸಿದ್ದ “FKCCI Industry-Institution Leaders’ Confluence – 2026: Bridging Education, Skill and Employment” ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಸನ್ಮಾನ್ಯ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ ಅವರು, FKCCI ಅಧ್ಯಕ್ಷರಾದ ಶ್ರೀಮತಿ ಉಮಾರೆಡ್ಡಿಯವರು ಹಾಗೂ FKCCI ಸದಸ್ಯರ ಗಣ್ಯ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉದ್ಯಮಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಶಿಕ್ಷಣ, ಕೌಶಲ್ಯ ಮತ್ತು ಉದ್ಯೋಗದ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚಿಸಲಾಯಿತು.
ಉದ್ಯಮದ ಅಗತ್ಯಗಳಿಗೆ ಅನುಗುಣವಾಗಿ ಯುವಜನರಿಗೆ ಗುಣಮಟ್ಟದ ಕೌಶಲ್ಯ ತರಬೇತಿ ನೀಡುವುದು, ಉದ್ಯೋಗಾವಕಾಶಗಳನ್ನು ಹೆಚ್ಚಿಸುವುದು ಮತ್ತು ಶಿಕ್ಷಣದಿಂದ ಉದ್ಯೋಗದತ್ತ ಸುಗಮವಾಗಿ ಸಾಗಲು ಅಗತ್ಯವಾದ ವ್ಯವಸ್ಥೆ ರೂಪಿಸುವ ಕುರಿತಂತೆ ಈ ಕಾರ್ಯಕ್ರಮದಲ್ಲಿ ಚರ್ಚಿಸಲಾಯಿತು.