26/06/2024
ತುರ್ತು ಪರಿಸ್ಥಿತಿಯ ಕರಾಳ ಇತಿಹಾಸಕ್ಕೆ 49 ವರ್ಷ ಸಂದ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ CITIZENS FOR SOCIAL JUSTICE ವತಿಯಿಂದ "ತುರ್ತು ಪರಿಸ್ಥಿತಿ - ಸಂವಿಧಾನ ಆಶಯಕ್ಕೆ ಅಪಚಾರ" ವಿಷಯದ ಕುರಿತು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ತಮ್ಮ ರಾಜಕೀಯ ದುರುದ್ದೇಶವನ್ನು ಪೂರೈಸಿಕೊಳ್ಳಲು ದೇಶದ ಪ್ರಜಾಪ್ರಭುತ್ವವನ್ನು ಕತ್ತಲೆಗೆ ನೂಕಿದ ಶ್ರೀಮತಿ ಇಂದಿರಾ ಗಾಂಧಿ ಅವರ ಸರ್ವಧಿಕಾರ ಧೋರಣೆ ಹಾಗೂ ಅಧಿಕಾರ ದುರ್ಬಳಕೆಯ ಪರಮಾವಾಧಿಯ ಅವಧಿಯಲ್ಲಿ ದೇಶಕ್ಕಾದ ನಷ್ಟ ಹಾಗೂ ಜನಸಾಮಾನ್ಯರು ಅನುಭವಿಸಿದ ಯಾತನೆಯ ಬಗ್ಗೆ ಬೆಳಕು ಚೆಲ್ಲುವ ಜತೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎರಡು ಅವಧಿಯ ಆಡಳಿತದಲ್ಲಿ ಜನ ಕಲ್ಯಾಣಕ್ಕಾಗಿ ತೆಗೆದುಕೊಂಡ ಕ್ರಮದ ಕುರಿತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ K.Annamalai ಅವರು ಆಳವಾಗಿ ವಿವರಿಸಿದರು.