Panemanglore Block Congress Minority Cell

Panemanglore Block Congress Minority Cell Contact information, map and directions, contact form, opening hours, services, ratings, photos, videos and announcements from Panemanglore Block Congress Minority Cell, Political organisation, bantval, Bantval.

10/09/2023
04/03/2023
02/01/2023

*ಸೂರಲ್ಪಾಡಿ ನೌಷಾದ್ ಹಾಜಿ* *ನಿಧನ.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ*ತೀವ್ರ* *ಸಂತಾಪ*

ಸಾಮಾಜಿಕ ಮತ್ತು ಧಾರ್ಮಿಕ ಸೇವಾ ಚಟುವಟಿಕೆಗಳ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ನೆನಪಾಗಿ ಉಳಿದು, "ನಂಡೆ ಪೆಂಙಳ್" ಅಭಿಯಾನದ ಮೂಲಕ ನೂರಾರು ಬಡ ಹೆಣ್ಣು ಮಕ್ಕಳ ಕಣ್ಣೀರೊರೆಸಿದ ಸಾಂತ್ವಾನ ಮುಖಂಡರಾಗಿರುವ ಜನಾಬ್ ಸೂರಲ್ಪಾಡಿ ನೌಷಾದ್ ಹಾಜಿ ಅವರು ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನ ಹೊಂದಿರುವುದು ಸಮಾಜಕ್ಕೆ ತುಂಬಲಾರದ ನಷ್ಟವಾಗಿರುತ್ತದೆ.
ಇವರು ಸಮಾಜಕ್ಕೆ ಮಾಡಿರುವ ಸತ್ಕರ್ಮಗಳನ್ನು ಸೃಷ್ಠಿಕರ್ತನು ಸ್ವೀಕರಿಸಲಿ ಹಾಗು ಅವರ ಪಾರತ್ರಿಕ ಜೀವನವು ಯಶಸ್ವಿಗೊಳಿಸಲಿ. ಇವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗು ಬಂಧು ಬಳಗಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

ಅವರ ಈ ಅಕಾಲಿಕ ನಿಧನಕ್ಕೆ *ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ*ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ.

*ಅರ್ಷದ್ ಸರವು*
*ಅಧ್ಯಕ್ಷರು
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ*

*🔥ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ. ಬಿ ರಮಾನಾಥ ರೈ ಅವರ ಜನ್ಮದಿನದ ಪ್ರಯುಕ್ತ "ಬೃಹತ್ ರಕ್ತದಾನ ಶಿಬಿರ"🔥**ಯುವ ಕಾಂಗ್ರೆಸ್ ಪಾಣೆ...
10/09/2022

*🔥ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಶ್ರೀ. ಬಿ ರಮಾನಾಥ ರೈ ಅವರ ಜನ್ಮದಿನದ ಪ್ರಯುಕ್ತ "ಬೃಹತ್ ರಕ್ತದಾನ ಶಿಬಿರ"🔥*

*ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಹಾಗೂ ಅಲ್ಪಸಂಖ್ಯಾತ ಘಟಕ ಪಾಣೆಮಂಗಳೂರು ಬ್ಲಾಕ್ ವತಿಯಿಂದ ಬೆಳ್ಳಿಪ್ಪಾಡಿ ಶ್ರೀ. ಬಿ ರಮಾನಾಥ ರೈ ಅವರ ಹುಟ್ಟುಹಬ್ಬದ ಪ್ರಯುಕ್ತ "ಬೃಹತ್ ರಕ್ತದಾನ ಶಿಬಿರ"*

*ದಿನಾಂಕ: 14-09-2022, ಬುಧವಾರ*
*ಸಮಯ: ಬೆಳಗ್ಗೆ 9:00 ರಿಂದ*
*ಸ್ಥಳ: ರಂಗೋಲಿ ಸಭಾಂಗಣ, ಬಿ.ಸಿ ರೋಡ್*

*ತಾವೂ ಬನ್ನಿ, ತಮ್ಮವರನ್ನು ಕರೆತನ್ನಿ🙏*

29/07/2022

ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ.

ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ.
ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಮುಖ್ಯಮಂತ್ರಿಗಳು ಗೃಹಸಚಿವ ಸ್ಥಾನದಿಂದ ಆರಗ ಜ್ಞಾನೇಂದ್ರ ಅವರನ್ನು ತಕ್ಷಣ ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು.

ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿರುವ ರಾಜ್ಯ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ.
ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರು ಅವರನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಬೇಕು. ಆದರೆ ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೆ ಕಿರುಕುಳ ನೀಡುವುದು ಸಲ್ಲದು.

#ಕೊಲೆಗಡುಕಸರ್ಕಾರ

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಲಸಂಖ್ಯಾತ ಘಟಕ ವತಿಯಿಂದ ಬಿ ಸಿ ರೋಡಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ....
16/06/2022

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಲಸಂಖ್ಯಾತ ಘಟಕ ವತಿಯಿಂದ ಬಿ ಸಿ ರೋಡಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ .

ರಾಧಾಕೃಷ್ಣ ಅಡ್ಯಂತಾಯ ಎಂಬಾತನು ಇಸ್ಲಾಂ ಧರ್ಮವನ್ನು ಅವಹೇಳನ ಮಾಡಿ ಸಾಮಾಜಿಕ ಅಶಾಂತಿ ಸೃಷ್ಟಿಸಿದ ಕುರಿತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಲ್ಲಸಂಖ್ಯಾತ ಘಟಕ ವತಿಯಿಂದ ಪತ್ರಿಕೋಷ್ಠಿ ನಡೆಸಿದರು.ಈ ರೀತಿಯ ಭಾಷಣದಿಂದಾಗಿ ಧರ್ಮ ಧರ್ಮಗಳ ನಡುವೆ ವೈಷಮ್ಯವನ್ನು ಉಂಟುಮಾಡಿ ಸಮಾಜದಲ್ಲಿ ಸೌಹಾರ್ಧತೆಗೆ ದೊಡ್ಡ ಕಂದಕ ಉಂಟಾಗುತ್ತದೆ . ಆದ್ದರಿಂದ ಗೌರವಾನ್ವಿತರಾದ ತಾವುಗಳು ದ್ವೇಷ ಭಾಷಣ ಮಾಡಿ ಇಸ್ಲಾಂ ಧರ್ಮವನ್ನು ಅವಹೇಳನ ಮಾಡಿದ ರಾಧಾಕೃಷ್ಣ ಅಡ್ಯಂತಾಯ ಮತ್ತು ಈ ಸಮಾವೇಷವನ್ನು ಸಂಘಟಿಸಿದ ಸಂಘಟಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಸ್ ಮೊಹಮ್ಮದ್,ರಾಜ್ಯ ಅಲ್ಪಸಂಖ್ಯಾತ ಘಟಕದ ಸಂಯೋಜಕರಾದ ಅಲ್ಬರ್ಟ್ ಮೆನೇಜಸ್,ಪುರಸಭಾ ಅಧ್ಯಕ್ಷರಾದ ಮೊಹಮ್ಮದ್ ಶರೀಫ್, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅರ್ಶಾದ್ ಸರವು, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್, ಪುರಸಭಾ ಸದಸ್ಯರಾದ ಸಿದ್ಧಿಕ್ ಗುಡ್ಡೆಯಂಗಡಿ,ಜಿಲ್ಲಾ ಅಸಂಘಟಿತ ಪ್ರಧಾನ ಕಾರ್ಯದರ್ಶಿ ನಿಯಾಝ್ ಪಜೀರ್ ಉಪಸ್ಥಿತರಿದ್ದರು

Address

Bantval
Bantval

Website

Alerts

Be the first to know and let us send you an email when Panemanglore Block Congress Minority Cell posts news and promotions. Your email address will not be used for any other purpose, and you can unsubscribe at any time.

Share