10/06/2025
ದೆಹಲಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ಸಾರಿಗೆ ಸಚಿವರಾದ ಶ್ರೀ .gadkari ಅವರನ್ನು ಇಂದು ಅವರ ಗೃಹಕಚೇರಿಯಲ್ಲಿ ಭೇಟಿಯಾಗಿ, ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಚರ್ಚೆ ನಡೆಸಿದೆ.
ರಾಜ್ಯದಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗಳ ಬಗ್ಗೆ ಚರ್ಚಿಸಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಒಪ್ಪಂದವಾಗಿ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಒಟ್ಟು 42 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇವುಗಳಲ್ಲಿ 27 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಉಳಿದ 15 ರಾಷ್ಟ್ರೀಯ ಹೆದ್ದಾರಿಗಳನ್ನು ಉನ್ನತೀಕರಿಸಬೇಕಾಗಿದೆ.
ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣದ ಬಗ್ಗೆ ಕೇಂದ್ರ ಸರ್ಕಾರ ಆಸಕ್ತಿ ವಹಿಸಿದ್ದು, ಈ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಪತ್ರವನ್ನೂ ಬರೆದಿದೆ. ಈ ಪ್ರಸ್ತಾವನೆಯ ಅಂತಿಮ ನಿರ್ಣಯವನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವುದು. ಸ್ಪಷ್ಟವಾದ ಪ್ರಸ್ತಾವನೆಯೊಂದಿಗೆ ದೆಹಲಿಗೆ ಮತ್ತೊಮ್ಮೆ ಚರ್ಚೆಗಾಗಿ ಬರಲಿದ್ದೇವೆ.
ಶಿರಾಡಿಘಾಟ್ಟಿನಲ್ಲಿ ಸುರಂಗ ನಿರ್ಮಾಣಕ್ಕೆ ಅರಣ್ಯ ಇಲಾಖೆಯ ಅನುಮತಿ ಅಗತ್ಯವಿದೆ. ಈ ವಿಷಯದಲ್ಲಿ ರಾಜ್ಯ ಸರ್ಕಾರದಿಂದ ಸ್ಪಷ್ಟ ಪ್ರಸ್ತಾವನೆ ಬೇಕಾಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದೆ.