19/04/2024
ಕಮಲನಗರ ತಾಲೂಕಿನ ದಾಬಕಾ (ಸಿ) ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಅತಿ ಕಡಿಮೆ ಮತದಾನವಾದ ಹಿನ್ನೆಲೆಯಲ್ಲಿ ಗುರುವಾರ ರಂಗೋಲಿ ಮತ್ತು ಮಾನವ ಸರಪಳಿ ಮೂಲಕ ಮತದಾನ ಜಾಗೃತಿ ಅಭಿಯಾನ ಮಾಡಲಾಯಿತು. ಅಭಿಯಾನದ ಉದ್ದೇಶ ಮತ್ತು ಮಹತ್ವದ ಬಗ್ಗೆ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾನ್ಯ ಶಿವಕುಮಾರ ಘಾಟೆ ಸರ್ ರವರು ತಿಳಿಸಿ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಗಪ್ಪ, ಡಿಇಓ, ಸದಸ್ಯರು, ಬಿಎಲ್ಓ, ಐಇಸಿ ಸಂಯೋಜಕರಾದ ಸವಿತಾ ನಾಗೇಶ ಸೇರಿದಂತೆ ಇತರರು ಇದ್ದರು.