16/09/2026
ಶಿವಮೊಗ್ಗ ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಕುಡಿಯುವ ನೀರು, ಮಹಿಳಾ ಶೌಚಾಲಯ, ಹಾಲುಣಿಸುವ ಕೇಂದ್ರ, ಸ್ವಚ್ಛತೆ ಹಾಗೂ ಸಿಸಿಟಿವಿ ಮತ್ತು ಬ್ಯಾಕಪ್ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲಿಸಿದೆ.
ಡಿ-ಗ್ರೂಪ್ ನೌಕರರಿಗೆ ಸುರಕ್ಷತಾ ಸಾಮಗ್ರಿ ನೀಡದಿರುವುದು, ಸಮಯಕ್ಕೆ ಸರಿಯಾಗಿ ವೇತನ ಪಾವತಿಸದಿರುವುದು, ATM ಕಾರ್ಡ್ ಪಡೆದು ಕಡಿಮೆ ವೇತನ ನೀಡುತ್ತಿರುವುದು ಹಾಗೂ ಕೆಲಸ ನೀಡಲು ₹12,000 ಹಣದ ಬೇಡಿಕೆ/ವಸೂಲಿ ನಡೆಯುತ್ತಿದೆ ಎಂಬ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ, ಸಮಗ್ರ ಪರಿಶೀಲನೆ ನಡೆಸುವಂತೆ ಸೂಚಿಸಿದೆ.
ಮಹಿಳಾ ಸಹಾಯವಾಣಿ ಸಂಖ್ಯೆಗಳು ಪ್ರಮುಖ ಸ್ಥಳಗಳಲ್ಲಿ ಸ್ಪಷ್ಟವಾಗಿ ಕಾಣುವಂತೆ ಅಳವಡಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದೆ.
ಈ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಗುತ್ತಿಗೆ ಷರತ್ತುಗಳ ಉಲ್ಲಂಘನೆ ಕಂಡುಬಂದಲ್ಲಿ ಸಂಬಂಧಪಟ್ಟ ಗುತ್ತಿಗೆ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮಗಳ ವರದಿಯನ್ನು 15 ದಿನಗಳೊಳಗಾಗಿ ಸಲ್ಲಿಸುವಂತೆ ನಿರ್ದೇಶಿಸಿದ್ದೇನೆ.