31/05/2026
ಇಂದು ದಾಂಡೇಲಿಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಪಂಡಿತ್ ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮವನ್ನು ಕೇಂದ್ರ ಸಚಿವರಾದ ಶ್ರೀ Pralhad Joshi ಅವರು ಉದ್ಘಾಟಿಸಿ ಮಾತನಾಡಿದರು.
ಪ್ರಧಾನಮಂತ್ರಿ ಶ್ರೀ Narendra Modi ಅವರ ನಾಯಕತ್ವದಲ್ಲಿ ಅಭಿವೃದ್ಧಿ ಹಾಗೂ ಸುಶಾಸನದ ಸಂಕಲ್ಪವನ್ನು ಮನೆಮನೆಗೂ ತಲುಪಿಸುವುದು, ಪಕ್ಷದ ಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಿಳಿಸುವುದು ಹಾಗೂ ಸಂಘಟನಾ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡುವ ಕುರಿತು ತಿಳಿಸಿದರು.
ಈ ವೇಳೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕರಾದ ಶ್ರೀ ಸು.ರಾಮಣ್ಣ ಅವರು “ನಮ್ಮ ಸಿದ್ಧಾಂತ” ವಿಷಯದ ಕುರಿತು ಮಾರ್ಗದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ Arvind Bellad ಶ್ರೀ Mahesh Tenginkai ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಜ್ಯೋತಿ ಪಾಟೀಲ, ಉಪಮಹಾಪೌರರಾದ ಶ್ರೀ ಸಂತೋಷ ಚವ್ಹಾಣ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ, ಉತ್ತರಕನ್ನಡ ಜಿಲ್ಲಾಧ್ಯಕ್ಷರಾದ ಎನ್ ಎಸ್ ಹೆಗ್ಡೆ ಸೇರಿದಂತೆ ಗಣ್ಯರು , ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.