20/02/2023
ಹಿಂದೂಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ.
ಸಂಕೇಶ್ವರ ಪಟ್ಟಣದಲ್ಲಿ ಹಿಂದವಿ ಸಾಮ್ರಾಜ್ಯದ ಸಂಸ್ಥಾಪಕ, ಭಾರತಮಾತೆಯ ವೀರಪುತ್ರ, ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಲಾಯಿತು. ಛತ್ರಪತಿ ಶಿವಾಜಿ ಮಹಾರಾಜರ ಅಪ್ರತಿಮ ದೇಶಭಕ್ತಿ, ಶೌರ್ಯ, ಸಾಹಸ, ಪರಾಕ್ರಮ, ಕೆಚ್ಚೆದೆಯ ಹೋರಾಟಗಳು ಸದಾ ಪ್ರೇರಣೆಯಾಗಿವೆ.
ಈ ಸಮಾರಂಭದಲ್ಲಿ ಹುಕ್ಕೇರಿಯ ಷ.ಬ್ರ. ಪ.ಪೂಜ್ಯ ಶ್ರೀ ಚಂದ್ರಶೇಖರ ಮಹಾಸ್ವಾಮಿಜಿಗಳು,ಪ.ಪೂ ಶ್ರೀ ಸಚ್ಚಿದಾನಂದ ಅಭಿನವ ವಿದ್ಯಾನರಸಿಂಹ ಭಾರತಿ ಮಹಾಸ್ವಾಮಿಗಳು, ಶ್ರೀ ಪ.ಪೂ. ವೇದಾಂತಚಾರ್ಯ ಶ್ರೀ ಮಂಜುನಾಥ ಭಾರತಿ ಸ್ವಾಮಿಜಿಗಳು ದಿವ್ಯ ಸಾನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಉತ್ತರ ಪ್ರಾಂತದ ಸಹ ಸಂಚಾಲಕರಾದ ಶ್ರೀ ಅರವಿಂದರಾವ ದೇಶಪಾಂಡೆ ಜಿ, ಸಂಸದರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಂಸದರಾದ ಶ್ರೀ ರಮೇಶ್ ಕತ್ತಿ, ಮಾಜಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.