Mgnregs - Uttara Kannada

Mgnregs - Uttara Kannada ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಪಡೆದು ಸ್ವಾವಲಂಬಿ ಬದುಕು ನಿಮ್ಮದಾಗಿಸಿಕೊಳ್ಳಿ....

ಗ್ರಾಮಾಭಿವೃದ್ಧಿಯ ಹೊಸ ಹಾದಿ...ದುಡಿಯುವ ಕೈಗಳಿಗೆ 💯 ದಿನಗಳ ಕಾಯಕ ಮಹಾತ್ಮ ಗಾಂಧಿ ನರೇಗಾಯೋಜನೆಯಡಿ ಕೆಲಸ ಪಡೆಯಲು ನಿಮ್ಮ ಗ್ರಾಮ ಪಂಚಾಯಿತಿಗೆ ಭೇ...
27/10/2025

ಗ್ರಾಮಾಭಿವೃದ್ಧಿಯ ಹೊಸ ಹಾದಿ...

ದುಡಿಯುವ ಕೈಗಳಿಗೆ 💯 ದಿನಗಳ ಕಾಯಕ

ಮಹಾತ್ಮ ಗಾಂಧಿ ನರೇಗಾ
ಯೋಜನೆಯಡಿ ಕೆಲಸ ಪಡೆಯಲು ನಿಮ್ಮ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಅಥವಾ ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000 ಗೆ ಕರೆ ಮಾಡಿ.

Chief Minister of Karnataka Mahatma Gandhi NREGA, Ministry of Rural Development, Government of India DK Shivakumar Priyank Kharge DIPR Karnataka

ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಕ್ರಿಯ ಕಾರ್ಮಿಕರಿಗೆ ಒಂದು ಮಹತ್ವದ ಮಾಹಿತಿ — ಅದು ಏನೆಂದರೆನಿಮ್ಮ NMMS e-...
09/10/2025

ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಕ್ರಿಯ ಕಾರ್ಮಿಕರಿಗೆ ಒಂದು ಮಹತ್ವದ ಮಾಹಿತಿ — ಅದು ಏನೆಂದರೆ
ನಿಮ್ಮ NMMS e-KYC ಮಾಡುವುದು ಈಗ ಕಡ್ಡಾಯವಾಗಿದೆ.

ಆದ್ದರಿಂದ, ಜಿಲ್ಲೆಯ ಎಲ್ಲಾ ತಾಲೂಕು ಮತ್ತು ಗ್ರಾಮ ಪಂಚಾಯತ ವ್ಯಾಪ್ತಿಯ ನರೇಗಾ ಕಾರ್ಮಿಕರು,
ತಮ್ಮ ನರೇಗಾ ಜಾಬ್ ಕಾರ್ಡ್‌ಗೆ e-KYC ಯನ್ನು ಅಕ್ಟೋಬರ್ 30ರೊಳಗಾಗಿ ಮಾಡಿಸಿಕೊಳ್ಳಬೇಕು.

ನಿಮ್ಮ ಸಹಕಾರದಿಂದ ಯೋಜನೆ ಇನ್ನಷ್ಟು ಪಾರದರ್ಶಕವಾಗಿ ಮತ್ತು ಪರಿಣಾಮಕಾರಿಯಾಗಿ ಮುಂದುವರಿಯಲಿದೆ.

ಅಕ್ಟೋಬರ್ - 02ಗಾಂಧಿ ಜಯಂತಿಗ್ರಾಮಗಳಲ್ಲಿ ಸಂಪೂರ್ಣ ನೈರ್ಮಲ್ಯ ಕಾಪಾಡುವ ಮೂಲಕ  ಗಾಂಧೀಜಿಯವರ ಸ್ವಚ್ಛ ಭಾರತ ನಿರ್ಮಾಣದ ಕನಸನ್ನು ನನಸು ಮಾಡೋಣ.  ...
02/10/2025

ಅಕ್ಟೋಬರ್ - 02

ಗಾಂಧಿ ಜಯಂತಿ

ಗ್ರಾಮಗಳಲ್ಲಿ ಸಂಪೂರ್ಣ ನೈರ್ಮಲ್ಯ ಕಾಪಾಡುವ ಮೂಲಕ ಗಾಂಧೀಜಿಯವರ ಸ್ವಚ್ಛ ಭಾರತ ನಿರ್ಮಾಣದ ಕನಸನ್ನು ನನಸು ಮಾಡೋಣ.

15/09/2025
ಇಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತನ ಮಾನ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ದಿಲೀಷ್ ಶಶಿ ಅವರು ಹಳಿಯಾಳ ತಾಲೂಕಿನ ಬಹುಗ್ರಾಮ ಕುಡಿಯುವ ನ...
25/07/2025

ಇಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತನ ಮಾನ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ದಿಲೀಷ್ ಶಶಿ ಅವರು ಹಳಿಯಾಳ ತಾಲೂಕಿನ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ತಾಲೂಕ ಪಂಚಾಯತ್ ಹಾಗೂ ತಾಲೂಕಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದರು.

ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆಯವ...
07/07/2025

ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆಯವರ ಅಧ್ಯಕ್ಷತೆಯಲ್ಲಿ ಇಂದು ವಿಡಿಯೋ ಸಂವಾದದ ಮೂಲಕ ಪ್ರಗತಿ ಪರಿಶೀಲನಾ ಸಭೆಯು ಉತ್ತರ ಕನ್ನಡ ಜಿಲ್ಲಾ ಪಂಚಾಯತನ ಸಭಾ ಭವನದಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಈಶ್ವರ ಕಾಂದೂ ಮತ್ತು ವಿವಿಧ ಶಾಖೆಯ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತನ ಸಿಬ್ಬಂದ್ಧಿಗಳು ಭಾಗಿಯಾಗಿದ್ದರು.

*Instagram* https://www.instagram.com/p/DLkj4vTv681/?igsh=MXBuZDZsNmduODFmMg== *Twitter* https://twitter.com/ZPUttaraKan...
02/07/2025

*Instagram*
https://www.instagram.com/p/DLkj4vTv681/?igsh=MXBuZDZsNmduODFmMg==

*Twitter*
https://twitter.com/ZPUttaraKannada/status/1940079794424881318?s=19

SBMG ಯೋಜನೆಯಡಿ ಗ್ರಾಮಗಳಲ್ಲಿ ಕೈಗೊಳ್ಳಲಾದ ಕಾರ್ಯಚಟುವಟಿಕೆಗಳ ಮೌಲ್ಯಮಾಪನ, ಮೇಲ್ವಿಚಾರಣೆ ಮತ್ತು ಶ್ರೇಣೀಕರಣದ ಉದ್ದೇಶದಿಂದ ಪ್ರಾರಂಬಿಸಲಾದ 'ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2025' ಅಭಿಯಾನದಲ್ಲಿ ತಪ್ಪದೇ ಭಾಗಿಯಾಗಿ!

ಸರ್ವೇಯಲ್ಲಿ ಭಾಗಿಯಾಗಲು ಕೂಡಲೇ ಪ್ಲೇಸ್ಟೋರ್‌ʼನಲ್ಲಿ SSG 2025 ಆಪ್‌ ಡೌನ್‌ಲೋಡ್‌ ಮಾಡಿಕೊಳ್ಳಿ.

https://play.google.com/store/apps/details?id=com.ssg.abc.ssg

ನಿಮ್ಮ ಗ್ರಾಮ, ನಿಮ್ಮ ಧ್ವನಿ!

Swachh Bharat Mission, India
Jal Jeevan Mission, India
Rural Development and Panchayat Raj - Karnataka
Panchayat Raj Karnataka

ಸಾವಿತ್ರಿಬಾಯಿ ಫುಲೆಮಹಿಳಾ ಸಬಲೀಕರಣ ಯೋಜನೆ."ಗ್ರಾಮೀಣ ಮಹಿಳೆಯರ ಸಬಲೀಕರಣ ನಮ್ಮ ಸಂಕಲ್ಪ"
30/06/2025

ಸಾವಿತ್ರಿಬಾಯಿ ಫುಲೆ
ಮಹಿಳಾ ಸಬಲೀಕರಣ ಯೋಜನೆ.

"ಗ್ರಾಮೀಣ ಮಹಿಳೆಯರ ಸಬಲೀಕರಣ ನಮ್ಮ ಸಂಕಲ್ಪ"

ಉತ್ತರ ಕನ್ನಡ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಸಚಿವರಾದ ಮಾ...
30/06/2025

ಉತ್ತರ ಕನ್ನಡ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಸಚಿವರಾದ ಮಾನ್ಯ ಶ್ರೀ ಮಂಕಾಳ ವೈದ್ಯ ರವರ ಅಧ್ಯಕ್ಷತೆಯಲ್ಲಿ ಇಂದು ಜಲ್ಲಾ ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಹಳಿಯಾಳ-ಜೋಯಿಡಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್.ವಿ. ದೇಶಪಾಂಡೆ, ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾನ್ಯ ಶ್ರೀ ಸತೀಶ ಕೃಷ್ಣಾ ಸೈಲ್, ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣ. ನಾಯ್ಕ, ಜಿಲ್ಲಾಧಿಕಾರಿಗಳಾದ ಶ್ರೀಮತಿ ಕೆ. ಲಕ್ಷ್ಮೀಪ್ರಿಯ ಹಾಗೂ ಜಿಪಂನ ಮಾನ್ಯ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಾದ ಶ್ರೀ ಈಶ್ವರ್ ಕಾಂದೂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಉತ್ತರ ಕನ್ನಡ ಜಿಲ್ಲಾ ಪಂಚಾಯತನ ಮಾನ್ಯ ಮುಖ್ಯ ಆಡಳಿತ ಅಧಿಕಾರಿಗಳಾದ ಶ್ರೀಮತಿ ಸುಷ್ಮಾ ಗೋಡಬೋಲೆ ರವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾ ಪಂಚಾಯತ ಭವ...
26/06/2025

ಉತ್ತರ ಕನ್ನಡ ಜಿಲ್ಲಾ ಪಂಚಾಯತನ ಮಾನ್ಯ ಮುಖ್ಯ ಆಡಳಿತ ಅಧಿಕಾರಿಗಳಾದ ಶ್ರೀಮತಿ ಸುಷ್ಮಾ ಗೋಡಬೋಲೆ ರವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾ ಪಂಚಾಯತ ಭವನದಲ್ಲಿ ಮಾಸಿಕ ಕೆ.ಡಿ.ಪಿ ಸಭೆ ನಡೆಯಿತು.
ಈ ಸಂಧರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತನ ಮಾನ್ಯ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಾದ ಶ್ರೀ ಈಶ್ವರ ಕಾಂದೂ, ಐ.ಎ.ಎಸ್ ಅಧಿಕಾರಿಗಳಾದ ಝಪಿಶಾನ ಹಕ್ ಹಾಗೂ ಜಿ.ಪಂನ ಹಿರಿಯ ಅಧಿಕಾರಿಗಳು ಮತ್ತು ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾದ್ದರು.

ಉತ್ತರ ಕನ್ನಡ ಜಿಲ್ಲಾ ಪಂಚಾಯತ ಹಾಗೂ ಕಾರವಾರ ತಾಲೂಕು ಪಂಚಾಯತನ ಸಹಯೋಗದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಅಭಿಯಾನ(ಸಂಜೀವಿ...
21/06/2025

ಉತ್ತರ ಕನ್ನಡ ಜಿಲ್ಲಾ ಪಂಚಾಯತ ಹಾಗೂ ಕಾರವಾರ ತಾಲೂಕು ಪಂಚಾಯತನ ಸಹಯೋಗದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಅಭಿಯಾನ(ಸಂಜೀವಿನಿ) ಯೋಜನೆಯ ಅಡಿಯಲ್ಲಿ ತಹಶೀಲ್ದಾರರ ಕಛೇರಿ ಆವರಣದಲ್ಲಿ ನಿರ್ಮಿಸಲಾದ ಅಕ್ಕ ಕೆಫೆಯನ್ನು ಉಸ್ತುವಾರಿ ಸಚಿವರಾದ ಶ್ರೀ ಮಂಕಾಳ ವೈದ್ಯ ಹಾಗೂ ಶಾಸಕರಾದ ಶ್ರೀ ಸತೀಶ್ ಕೃಷ್ಣ ಸೈಲ್ ರವರುಗಳು ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕೆ. ಲಕ್ಷ್ಮೀಪ್ರಿಯ, ಮಾನ್ಯ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಾದ ಶ್ರೀ ಈಶ್ವರ ಕಾಂದೂ, ಯೋಜನಾ ನಿರ್ದೇಶಕರಾದ ಕರೀಂ ಅಸದಿ, ಜಿ.ಪಂನ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವು ಮಹಿಳಾ ಸಂಘಸಂಸ್ಥೆಯವರು ಹಾಗೂ ಸಿಬ್ಬಂದ್ಧಿಗಳು ಉಪಸ್ಥಿತರಿದ್ದರು

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತನ ಮಾನ್ಯ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಾದ ಶ್ರೀ ಈಶ್ವರ ಕಾಂದೂ ರವರು ಇಂದು ಪೋಲಿಸ ಭವನದಲ್ಲಿ ಜಿಲ್ಲಾ...
21/06/2025

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯತನ ಮಾನ್ಯ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಾದ ಶ್ರೀ ಈಶ್ವರ ಕಾಂದೂ ರವರು ಇಂದು ಪೋಲಿಸ ಭವನದಲ್ಲಿ ಜಿಲ್ಲಾ ಪಂಚಾಯತ, ಆಯುಷ್ ಇಲಾಖೆ ಉತ್ತರ ಕನ್ನಡ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿ ಯೋಗಾಭ್ಯಾಸ ಮಾಡಿದರು.

Address

Karwar

Website

Alerts

Be the first to know and let us send you an email when Mgnregs - Uttara Kannada posts news and promotions. Your email address will not be used for any other purpose, and you can unsubscribe at any time.

Contact The Organization

Send a message to Mgnregs - Uttara Kannada:

Share