District Administration Koppal

District Administration Koppal Contact information, map and directions, contact form, opening hours, services, ratings, photos, videos and announcements from District Administration Koppal, Government Organization, District Administration Koppal, Koppal.

13/09/2024

ಕೊಪ್ಪಳ ಜಿಲ್ಲೆ : ಕಳಪೆ ಆಹಾರ ಮಾರಾಟ ಮಾಡಿದ್ದಕ್ಕೆ ಲಕ್ಷಾಂತರ ದಂಡ ಶಿಕ್ಷೆ
====
ಕೊಪ್ಪಳ, ಸೆಪ್ಟಂಬರ್ 13 (ಕರ್ನಾಟಕ ವಾರ್ತೆ): ಕೊಪ್ಪಳ ತಾಲೂಕಿನಲ್ಲಿ ಕಳಪೆ ಗುಣಮಟ್ಟದ ಆಹಾರ ಉತ್ಪಾದಕರು ಮತ್ತು ಮಾರಾಟಗಾರರಿಗೆ ದಂಡ ವಿಧಿಸಿ ಬಿಸಿ ಮುಟ್ಟಿಸಲಾಗಿದೆ.
ಕೊಪ್ಪಳ ತಾಲೂಕಿನ ಕಳಪೆ ಗುಣಮಟ್ಟದ ಸಾಂಬಾರ್ ಮಸಾಲಾ ಉತ್ಪಾದಕರಿಗೆ ರೂ.1 ಲಕ್ಷ, ಗಂಗಾವತಿ ತಾಲೂಕಿನ ಕಳಪೆ ಗುಣಮಟ್ಟದ ಉಪ್ಪು ಮಾರಾಟಗಾರರಿಗೆ 1.5 ಲಕ್ಷ ರೂ. ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಕಳಪೆ ಗುಣಮಟ್ಟದ ಸಾಂಬಾರ್ ಮಸಾಲಾ ಉತ್ಪಾದಕರಿಗೆ 1 ಲಕ್ಷ ರೂ., ಕಳಪೆ ಗುಣಮಟ್ಟದ ಉಪ್ಪು ಉತ್ಪಾದಕರಿಗೆ 75 ಸಾವಿರ ರೂ.ದಂಡ ವಿಧಿಸಿ ಆದೇಶಿಸಲಾಗಿದೆ.
ಪ್ರಕರಣದ ಹಿನ್ನೆಲೆ : ಕೊಪ್ಪಳ ಜಿಲ್ಲೆಯ ಆಹಾರ ಸುರಕ್ಷತಾಧಿಕಾರಿಗಳು ಜೂನ್ ತಿಂಗಳಲ್ಲಿ 97 ಸರ್ವೇ ಆಹಾರ ಮಾದರಿ ಹಾಗೂ 20 ಕಾನೂನಾತ್ಮಕ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ವಿಭಾಗೀಯ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಅದರಲ್ಲಿ ಕೊಪ್ಪಳ ತಾಲೂಕಿನಲ್ಲಿ ‘ಸಾಂಬಾರ್ ಮಸಾಲಾ ಪಾಕೆಟ್’, ಗಂಗಾವತಿ ತಾಲೂಕಿನಲ್ಲಿ ‘ಉಪ್ಪು’ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ‘ಸಾಂಬಾರ್ ಮಸಾಲಾ ಪಾಕೇಟ್’ ಮತ್ತು ‘ಉಪ್ಪು’ಗಳು ಕಳಪೆ ಆಹಾರ ಎಂದು ಪ್ರಯೋಗಾಲಯವು ವರದಿ ನೀಡಿದ ಪ್ರಯುಕ್ತ ಆಹಾರ ಸುರಕ್ಷತಾಧಿಕಾರಿಗಳು ಈ ಮೇಲಿನ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಉತ್ಪಾದನೆ ಹಾಗೂ ಮಾರಾಟ ಮಾಡುತ್ತಿದ್ದವರ ವಿರುದ್ಧ ಆಹಾರ ಸುರಕ್ಷತಾಧಿಕಾರಿಗಳು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಕೊಪ್ಪಳ ಇಲಾಖೆಯಿಂದ ಮಾನ್ಯ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದರು.
ಅದರಂತೆ ಸೆ.12ರಂದು ಕೊಪ್ಪಳ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಸಿದ್ದರಾಮೇಶ್ವರ್ ಅವರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಅಪರ ಜಿಲ್ಲಾಧಿಕಾರಿಗಳು ಒಂದೆ ದಿನದಲ್ಲಿ ಒಟ್ಟು 4.25 ಲಕ್ಷ ರೂ.ಗಳ ದಂಡ ವಿಧಿಸಿದರು. ಇನ್ಮುಂದೆ ಕಳಪೆ ಗುಣಮಟ್ಟದ ಆಹಾರ ವಸ್ತುಗಳನ್ನು ಮಾರಾಟ ಮಾಡಿದಲ್ಲಿ ಶಾಸ್ವತವಾಗಿ ಆಹಾರ ಉತ್ಪಾದನೆಯ ಪರವಾನಿಗೆ ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಿದರು.

13/09/2024

ಸೆ.14, 15ರಂದು ನಿಗದಿಯಾಗಿದ್ದ ಪರೀಕ್ಷೆ ಮುಂದೂಡಿಕೆ
===
ಕೊಪ್ಪಳ, ಸೆಪ್ಟಂಬರ್ 13 (ಕರ್ನಾಟಕ ವಾರ್ತೆ): ಸೆ.14ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ಸೆಪ್ಟೆಂಬರ್ 15ರಂದು ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.
10-09-2024ರ ಕರ್ನಾಟಕ ಸರ್ಕಾರದ ನಡಾವಳಿಯಲ್ಲಿ ‘ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬAಧಿಸಿದAತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ’ ಎಂದು ತಿಳಿಸಲಾಗಿರುತ್ತದೆ.
ಮೇಲ್ಕಂಡ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ 13-03-2024ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕಿರುತ್ತದೆ. ಆದ್ದರಿಂದ ಸೆ.14ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ಸೆಪ್ಟೆಂಬರ್ 15ರಂದು ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಇತರೆ ದಿನಾಂಕಗಳಲ್ಲಿ ನಿಗದಿಪಡಿಸಲಾಗಿದ್ದ ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ನೀಡಿ, ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ ಮುಕ್ತಾಯವಾದ ನಂತರ ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ತಿಳಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ತಿಳಿಸಿದ್ದಾರೆ. ಈ ಬಗ್ಗೆ ಈ ಲಿಂಕ್ https://kpsc.kar.nic.in/exam_14n15.pdf ಬಳಸಿ ಮಾಹಿತಿ ಪಡೆಯಬಹುದಾಗಿದೆ.

13/09/2024

ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ
===
ಕೊಪ್ಪಳ, ಸೆಪ್ಟಂಬರ್ 13 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಸೆಪ್ಟಂಬರ್ 17 ರಂದು ಬೆಳಿಗ್ಗೆ 9ಕ್ಕೆ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಧ್ವಜಾರೋಹಣ ನಡೆಸುವರು. ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ, ಮಾನ್ಯ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಕೆ. ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ಗಂಗಾವತಿ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಜಿ. ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ, ತುಂಗಭದ್ರ ಯೋಜನೆ ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್‌ಸಾಬ್ ನಬೀಬ್ ಸಾಬ್ ದೋಟಿಹಾಳ, ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಎಸ್.ಎಂ. ಪಟೇಲ್, ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತ ಬೆಂಗಳೂರದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ. ಮೋಹನ್‌ರಾಜ್, ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ, ಡಾ.ರಾಮ್ ಎಲ್. ಅರಸಿದ್ದಿ ಉಪಸ್ಥಿತರಿರುವರು.

ಸೆ.14ರಿಂದ ಸ್ವಚ್ಛತಾ ಹೀ ಸೇವಾ ವಿಶೇಷಜನಾಂದೋಲನ: ರಾಹುಲ್ ಪಾಂಡೆಯ====ಕೊಪ್ಪಳ, ಸೆಪ್ಟಂಬರ್ 13 (ಕರ್ನಾಟಕ ವಾರ್ತೆ): ಜಿಲ್ಲೆಯ ಎಲ್ಲಾ ಗ್ರಾಮೀಣ ...
13/09/2024

ಸೆ.14ರಿಂದ ಸ್ವಚ್ಛತಾ ಹೀ ಸೇವಾ ವಿಶೇಷ
ಜನಾಂದೋಲನ: ರಾಹುಲ್ ಪಾಂಡೆಯ
====
ಕೊಪ್ಪಳ, ಸೆಪ್ಟಂಬರ್ 13 (ಕರ್ನಾಟಕ ವಾರ್ತೆ): ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ‘ಸ್ವಚ್ಛತಾ ಹಿ ಸೇವಾ/ ಸ್ವಚ್ಛತೆಯೇ ಸೇವೆ’ ಎಂಬ ವಿಶೇಷ ಜನಾಂದೋಲನವನ್ನು ಸೆಪ್ಟಂಬರ್ 14 ರಿಂದ ಅಕ್ಟೋಬರ್ 02ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ತಿಳಿಸಿದ್ದಾರೆ.
ಅಕ್ಟೋಬರ್ 02ರ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಸ್ಮರಣಾರ್ಥವಾಗಿ `‘ಸ್ವಚ್ಛ ಭಾರತ ದಿನ’' ವನ್ನಾಗಿ ಆಚರಿಸಲಾಗುತ್ತಿದೆ. ಗಾಂಧೀಜಿ ಅವರ ಧ್ಯೇಯವಾಕ್ಯ ‘ಸ್ವಚ್ಛತೆಯೇ ದೈವತ್ವ’ ಎಂಬ ಕನಸನ್ನು ನನಸಾಗಿಸಲು ಸೆಪ್ಟಂಬರ್ 14 ರಿಂದ ಅಕ್ಟೋಬರ್ 02ರ ವರೆಗೆ 17 ದಿನಗಳ ವರೆಗೆ ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ‘ಸ್ವಚ್ಛತಾ ಹಿ ಸೇವಾ/ಸ್ವಚ್ಛತೆಯೇ ಸೇವೆ’ ಎಂಬ ವಿಶೇಷ ಆಂದೋಲನ ಹಮ್ಮಿಕೊಳ್ಳಲು ಕೇಂದ್ರ ಜಲಶಕ್ತಿ ಮಂತ್ರಾಲಯದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ತೀರ್ಮಾನಿಸಲಾಗಿದೆ.
ಈ ವರ್ಷದ ‘ಸ್ವಚ್ಛತಾ ಹಿ ಸೇವಾ/ಸ್ವಚ್ಛತೆಯೇ ಸೇವೆ’ ಎಂಬ ವಿಶೇಷ ಆಂದೋಲನದ ಘೋಷವಾಕ್ಯವಾಗಿ ಸಭಾ ಸ್ವಚ್ಛತೆ ಸಂಸ್ಕಾರ ಸ್ವಚ್ಛತೆ ಎಂದು ಘೋಷಿಸಲಾಗಿದೆ. ಎಲ್ಲೆಡೆ ಸದೃಶ್ಯ ಸ್ವಚ್ಛತೆ ಸಾಧಿಸಿ, ಸ್ವಚ್ಛ ಸುಂದರ, ಸಧೃಢ ಗ್ರಾಮಗಳನ್ನು ರೂಪಿಸುವ ಮಹತ್ವಾಕಾಂಕ್ಷೆಯನ್ನು ಹೊಂದಲಾಗಿದೆ.
ಕಳೆದ ವರ್ಷದಂತೆಯೇ ಗ್ರಾಮಗಳ ಸ್ವಚ್ಛತೆಗೆ ಸ್ವಯಂಪ್ರೇರಿತರಾಗಿ ಶ್ರಮದಾನ ಚಟುವಟಿಕೆಗಳಲ್ಲಿ ಭಾಗವಹಿಸುವುದು. ಜಿಲ್ಲೆಯ ತಾಲ್ಲೂಕು/ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಹೆಚ್ಚು ಜನ ಜಂಗುಳಿಯಿರುವ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಕೆರೆ, ಹಳ್ಳ, ನದಿ ತೀರ, ಸಾಂಸ್ಥಿಕ/ಸಮುದಾಯ ಭವನ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು, ಚರಂಡಿಗಳು ಮತ್ತು ನಾಲಾಗಳು ಮುಂತಾದ ಸ್ಥಳಗಳಲ್ಲಿ ಸ್ವಚ್ಛತೆಯ ಮತ್ತು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ ಹಾಗೂ ಇತರ ವಿಷಯಗಳ ಕುರಿತು ಜಾಗೃತಿ, ದೃಶ್ಯ ಸ್ವಚ್ಛತೆ ಕಾಯ್ದುಕೊಳ್ಳಲು ಶ್ರಮದಾನ ಮತ್ತು ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ.
ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಗಳು, ಎನ್.ಜಿ.ಓ., ಎಸ್.ಹೆಚ್.ಜಿ., ನೆಹರೂ ಯುವ ಕೇಂದ್ರ, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಂಬAಧಿತ ಪಾಲುದಾರರೊಂದಿಗೆ ತಮ್ಮ ಹಂತದಲ್ಲಿ ‘ಸ್ವಚ್ಛತಾ ಹಿ ಸೇವಾ/ಸ್ವಚ್ಛತೆಯೇ ಸೇವೆ’ ಜನಾಂದೋಲನ ಹಮ್ಮಿಕೊಳ್ಳಬೇಕು. ಜಿಲ್ಲೆಯ ಸಾರ್ವಜನಿಕರು ಈ ಜನಾಂದೋಲನದಲ್ಲಿ ಪಾಲ್ಗೊಂಡು ಸಧೃಢ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಜಿಪಂ ಸಿಇಓ ಅವರು ಮನವಿ ಮಾಡಿದ್ಧಾರೆ.

ಕೊಪ್ಪಳದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ===ಕೊಪ್ಪಳ, ಸೆಪ್ಟೆಂಬರ್ 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ...
13/09/2024

ಕೊಪ್ಪಳದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ
===
ಕೊಪ್ಪಳ, ಸೆಪ್ಟೆಂಬರ್ 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಗರದ ಪ್ಯಾಟಿ ಈಶ್ವರ ದೇವಸ್ಥಾನ ಸಭಾಂಗಣದಲ್ಲಿ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ದರ್ಗದ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ, ಪೌಷ್ಠಿಕ ಆಹಾರದ ಸೇವನೆ ಮಾಡುವುದರಿಂದ ರೋಗರುಜಿನುಗಳಿಂದ ದೂರ ಇರಬಹುದು ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಮಾತನಾಡಿ, ಪೋಷಣ್ ಮಾಸಾಚರಣೆಯ ಪ್ರಮುಖ ಅಂಶಗಳಾದ ರಕ್ತಹೀನತೆ ತಡೆಯುವುದು, ಪೋಷಣ್ ಅಭಿಯಾನ ಯೋಜನೆಯಡಿ ಬರುವ ಪ್ರತಿಯೊಂದು ಸೌಲಭ್ಯವನ್ನು ಪಡೆದುಕೊಂಡು ಅಪೌಷ್ಟಿಕತೆಯನ್ನು ತೊಲಗಿಸುವಲ್ಲಿ ಮಹಿಳೆಯರ ಪಾತ್ರ ಬಹಳ ಪ್ರಮುಖವಾಗಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ತಿಪ್ಪಣ್ಣ ಪಿ ಸಿರಸಗಿ ಅವರು ಮಾತನಾಡಿ, ಅಪೌಷ್ಟಿಕಮುಕ್ತ ದೇಶವನ್ನಾಗಿ ಮಾಡಲು ನಾವೆಲ್ಲರೂ ಕೈ ಜೋಡಿಸೋಣ ಎಂದು ಹೇಳಿದರು. ಪೌಷ್ಟಿಕತೆಯ ಸಿರಿ ಧಾನ್ಯಗಳ ಬಳಕೆ ಕುರಿತು ಅಂಗನವಾಡಿಯಲ್ಲಿ ವಿತರಿಸುವ ಆಹಾರ ಪದಾರ್ಥಗಳನ್ನು ಉಪಯೋಗಿಸುವಂತೆ ಸಾರ್ವಜನಿಕರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಒಂದನೇ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ, ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಸನ್ಮಾನ ಕಾರ್ಯಕ್ರಮ, ಬೇಬಿ ಶೋ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಈ ಸಂಧರ್ಭದಲ್ಲಿ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೊಟಗಾರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೂಪಾ ಗಂಧದ, ಶಿವಶರಣಪ್ಪ ಗದ್ದಿ ಸೇರಿದಂತೆ ವಲಯ ಮೇಲ್ವಿಚಾರಕರು, ಪೋಷಣ್ ಅಭಿಯಾನ ಯೋಜನೆಯ ತಾಲ್ಲೂಕು ಸಂಯೋಜಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಗರ್ಭಿಣಿಯರು ಊರಿನ ಸದಸ್ಯರು ಉಪಸ್ಥಿತರಿದ್ದರು.

ಮಾನವ ಸರಪಳಿ ಕಾರ್ಯಕ್ರಮಕ್ಕೆ ಸಿದ್ಧತೆಪೂರ್ಣ: ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್===ಕೊಪ್ಪಳ, ಸೆಪ್ಟೆಂಬರ್ 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ...
13/09/2024

ಮಾನವ ಸರಪಳಿ ಕಾರ್ಯಕ್ರಮಕ್ಕೆ ಸಿದ್ಧತೆ
ಪೂರ್ಣ: ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್
===
ಕೊಪ್ಪಳ, ಸೆಪ್ಟೆಂಬರ್ 13 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಐತಿಹಾಸಿಕವಾಗಿ ಸೆಪ್ಟೆಂಬರ್ 15ರಂದು ನಡೆಯಲಿರುವ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಜಿಲ್ಲಾಡಳಿತ ಭವನದಲ್ಲಿನ ಕೇಸ್ವನ್ ಹಾಲನಲ್ಲಿ ಸೆಪ್ಟೆಂಬರ್ 13ರಂದು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ರಾಜ್ಯದ ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆವರೆಗೆ ಒಟ್ಟು 2500 ಕಿ.ಮೀ ಮಾನವ ಸರಪಳಿ ರಚನೆಯ ಮೂಲಕ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಅದರಂತೆ ಕೊಪ್ಪಳ ಜಿಲ್ಲೆಯಲ್ಲಿ ಸಹ ಸೆಪ್ಟೆಂಬರ್ 15ರಂದು ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮ ಪಂಚಾಯತಿಯ ಬೆಳಗಟ್ಟಿ ಗ್ರಾಮದಿಂದ ಬೆಳಗ್ಗೆ 9.30ಕ್ಕೆ ಪ್ರಾರಂಭವಾಗಿ ಹಿರೇಸಿಂಧೋಗಿ, ಚಿಕ್ಕಿಸಿಂಧೋಗಿ, ಕೊಪ್ಪಳ ನಗರ, ಗಿಣಿಗೇರಾ, ಹೊಸಳ್ಳಿ ಮಾರ್ಗವಾಗಿ ಕೊಪ್ಪಳ ಭೌಗೋಳಿಕ ಸರಹದ್ದಾದ ಮುನಿರಾಬಾದ್ ಡ್ಯಾಮವರೆಗೆ ಜಿಲ್ಲೆಯಲ್ಲಿ ಒಟ್ಟು 53 ಕಿಲೋ ಮೀಟರ್ ಮಾನವ ಸರಪಳಿ ರಚನೆಯಾಗಲಿದೆ ಎಂದು ಅವರು ತಿಳಿಸಿದರು.
ಸೆಪ್ಟೆಂಬರ್ 15ರಂದು ಬೆಳಗ್ಗೆ 9.37ರಿಂದ 9.40ರವರೆಗೆ ನಾಡಗೀತೆ ನಡೆಯಲಿದೆ. ಬೆಳಗ್ಗೆ 9.40 ರಿಂದ 9.55ರವರೆಗೆ ಮುಖ್ಯ ಅತಿಥಿಗಳಿಂದ ಭಾಷಣ ನಡೆಯಲಿದೆ. ಬೆಳಗ್ಗೆ 9.55ರಿಂದ 9.57ರವರೆಗೆ ಸಂವಿಧಾನದ ಪ್ರಸ್ತಾವನೆ ಓದು ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9.57ರಿಂದ 9.59ರವರೆಗೆ ಮಾನವ ಸರಪಳಿಯಲ್ಲಿ ಕೈಕೈ ಹಿಡಿದು ನಿಲ್ಲಲಾಗುತ್ತದೆ. 10 ಗಂಟೆಗೆ ಮಾನವ ಸರಪಳಿಯಲ್ಲಿ ಎರಡು ಕೈಗಳನ್ನು ಮೇಲೆತ್ತಿ ಜೈಹಿಂದ ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿ ಕಾರ್ಯಕ್ರಮ ಮುಕ್ತಾಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ವಸಹಾಯ ಸಂಘದ ಪ್ರತಿನಿಧಿಗಳು, ಹಾಲು ಒಕ್ಕೂಟದ ಸದಸ್ಯರು ಸೇರಿದಂತೆ ಆಯಾ ಕಡೆಗಿನ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದಾರೆ. ಶಾಲಾ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ನೋಡಿಕೊಳ್ಳಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಮಾನವ ಸರಪಳಿ ಹೊರಡುವ ಮಾರ್ಗಗಳ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ಮತ್ತು ಪಿಡಿಓ ಅವರ ಸಹಭಾಗಿತ್ವದಲ್ಲಿ ಆಯಾ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ. ಮಾನವ ಸರಪಳಿ ಆರಂಭವಾಗುವ ಸ್ಥಳದಿಂದ ಮುಕ್ತಾಯದ ಸ್ಥಳದವರೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲು ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.
ಮಾನವ ಸರಪಳಿ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಪ್ರತಿ 5 ಕಿ.ಮೀಗೆ ಒಂದರAತೆ ಆಂಬ್ಯೂಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿ ಸಾರ್ವಜನಿಕರ ಹಿತಕ್ಕಾಗಿ ವೈದ್ಯಕೀಯ ಕಿಟ್‌ನೊಂದಿಗೆ ಮಹಿಳಾ ಶೂಶ್ರೂಕರನ್ನು ನೇಮಿಸಲಾಗಿದೆ.
ಈ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಹತ್ತಾರು ಬಾರಿ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಯಾ ಗ್ರಾಮ ಪಂಚಾಯತ್‌ಗಳಲ್ಲಿ ಧ್ವನಿವರ್ಧಕ ಮೂಲಕ ಪ್ರಚಾರ ಮಾಡಲಾಗಿದೆ. ಎಲ್ಲ ಆಕಡೆಗಳಲ್ಲಿ ಬ್ಯಾನರ್ ಅಳವಡಿಸಿ ವ್ಯಾಪಕ ಪ್ರಚಾರ ಮಾಡಲಾಗಿದೆ.
ಮಾನವ ಸರಪಳಿ ಕಾರ್ಯಕ್ರಮವು ಎಲ್ಲಾ ಕಡೆಗೆ ಅಚ್ಚುಕಟ್ಟಾಗಿ ನಡೆಯುವ ನಿಟ್ಟಿನಲ್ಲಿ ಬೆಳಗಟ್ಟಿಯಿಂದ ಹೊಸಪೇಟೆ ಸರಹದ್ದಿನವರೆಗೆ ಮಾರ್ಕಿಂಗ್ ಮಾಡುವ ಕಾರ್ಯವು ಸಹ ಪೂರ್ಣಗೊಂಡಿದೆ ಎಂದು ತಿಳಿಸಿದರು.
ಸೆ.15ರಂದು ನಡೆಯುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕೊಪ್ಪಳ ತಾಲೂಕು, ಕೊಪ್ಪಳ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಪ್ಪದೇ ಭಾಗವಹಿಸಿ ಕಾರ್ಯಕ್ರಮ ಯಶಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಪತ್ರಿಕಾಗೋಷ್ಠಿಯ ಮೂಲಕ ಕೊಪ್ಪಳ ಜಿಲ್ಲೆಯ ಎಲ್ಲ ತಾಲೂಕಿನ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಜು ತಳವಾರ ಇದ್ದರು.

ಕೊಪ್ಪಳ ಜಿಲ್ಲೆಯಲ್ಲಿ ಮಾನವಸರಪಳಿ: ರೂಟ್ ಮ್ಯಾಪ್ ಅಂತಿಮ====  ಕೊಪ್ಪಳ, ಸೆಪ್ಟೆಂಬರ್ 13 (ಕರ್ನಾಟಕ ವಾರ್ತೆ): ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ...
13/09/2024

ಕೊಪ್ಪಳ ಜಿಲ್ಲೆಯಲ್ಲಿ ಮಾನವ
ಸರಪಳಿ: ರೂಟ್ ಮ್ಯಾಪ್ ಅಂತಿಮ
====
ಕೊಪ್ಪಳ, ಸೆಪ್ಟೆಂಬರ್ 13 (ಕರ್ನಾಟಕ ವಾರ್ತೆ): ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 15ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಸಲಾಗುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ರೂಟ್ ಮ್ಯಾಪ್‌ನ್ನು ಅಂತಿಮಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮವು ಕೊಪ್ಪಳ ತಾಲೂಕಿನ ಬೆಳಗಟ್ಟಿ ಗ್ರಾಮದಿಂದ ಬೆಳಗ್ಗೆ 9.30ಕ್ಕೆ ಪ್ರಾರಂಭವಾಗಿ ಹಿರೇಸಿಂಧೋಗಿ, ಚಿಕ್ಕಿಸಿಂಧೋಗಿ, ಕೊಪ್ಪಳ ನಗರ, ಗಿಣಿಗೇರಾ, ಹೊಸಳ್ಳಿ ಮಾರ್ಗವಾಗಿ ಕೊಪ್ಪಳ ಭೌಗೋಳಿಕ ಸರಹದ್ದಾದ ಮುನಿರಾಬಾದ್ ಡ್ಯಾಮವರೆಗೆ ಜಿಲ್ಲೆಯಲ್ಲಿ ಒಟ್ಟು 53 ಕಿಲೋ ಮೀಟರ್ ಮಾನವ ಸರಪಳಿಯನ್ನು ರಚನೆಯಾಗಲಿದೆ. ಈ ಮಾನವ ಸರಪಳಿಯ ಮುಖ್ಯ ಸಮಾರಂಭವು ಕೊಪ್ಪಳ ನಗರದ ಅಶೋಕ ಸರ್ಕಲನಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

13/09/2024

ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಎಲ್ಲರೂ
ಕೈ ಜೋಡಿಸೋಣ: ಬಸವರಾಜ ರಾಯರೆಡ್ಡಿ
===
ಕೊಪ್ಪಳ ಸೆಪ್ಟೆಂಬರ್ 13 (ಕರ್ನಾಟಕ ವಾರ್ತೆ): ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 15 ರಂದು ಆಯೋಜಿಸಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲೆಯ ಜನತೆ ಭಾಗವಹಿಸಿ ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಎಲ್ಲರೂ ಕೈ ಜೋಡಿಸಬೇಕು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ತಿಳಿಸಿದ್ದಾರೆ.
ಗದಗ ಜಿಲ್ಲೆಯಿಂದ ಮಾನವ ಸರಪಳಿಯು ಕೊಪ್ಪಳ ಜಿಲ್ಲೆಯ ರಾಜ್ಯ ಹೆದ್ದಾರಿ ಬೆಳಗಟ್ಟಿ ಬಳಿ ಜೋಡಣೆಯಾಗಲಿದೆ. ಬೆಳಗಟ್ಟಿ ಗ್ರಾಮದಿಂದ ಆರಂಭವಾಗಿ ವಿವಿಧ ಗ್ರಾಮಗಳ ಮೂಲಕ ಕೊಪ್ಪಳ ನಗರದಿಂದ ಮುನಿರಾಬಾದ್ ಡ್ಯಾಂವರೆಗೆ ಬೃಹತ್ ಮಾನವ ಸರಪಳಿಯನ್ನು ಆಯೋಜನೆ ಮಾಡಲಾಗುತ್ತದೆ. ಭಾರತ ಸಂವಿಧಾನದ ಗೌರವ ಮತ್ತು ಘನತೆಯನ್ನು ಎತ್ತಿ ಹಿಡಿಯುವ ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಜನರು ಕೈ ಜೋಡಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲೆಯ ಜನತೆಯಲ್ಲಿ ಅವರು ಮನವಿ ಮಾಡಿದ್ದಾರೆ.

ಮಾನವ ಸರಪಳಿ: ನೋಡಲ್ ಅಧಿಕಾರಿಗಳೊಂದಿಗೆ ಸಭೆ===  ಕೊಪ್ಪಳ, ಸೆಪ್ಟೆಂಬರ್ 13 (ಕರ್ನಾಟಕ ವಾರ್ತೆ): ಅಂತಾರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ...
13/09/2024

ಮಾನವ ಸರಪಳಿ: ನೋಡಲ್ ಅಧಿಕಾರಿಗಳೊಂದಿಗೆ ಸಭೆ
===
ಕೊಪ್ಪಳ, ಸೆಪ್ಟೆಂಬರ್ 13 (ಕರ್ನಾಟಕ ವಾರ್ತೆ): ಅಂತಾರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸಿದ್ಧತೆ ಪರಿಶೀಲಿಸಲು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ ಅವರು ಸೆಪ್ಟೆಂಬರ್ 13ರಂದು ಸಭೆ ನಡೆಸಿದರು.
ಕೊಪ್ಪಳ ತಾಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕಾರ್ಯಕ್ರಮದ ಎಲ್ಲ ನೋಡಲ್ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
ಕೊಪ್ಪಳ ಜಿಲ್ಲೆಯಲ್ಲಿ ಕಾರ್ಯಕ್ರಮವು ಸೆಪ್ಟೆಂಬರ್ 15ರಂದು ಅಚ್ಚುಕಟ್ಟಾಗಿ ನಡೆಯಬೇಕು. ವಿಶೇಷವಾಗಿ ಕಾರ್ಯಕ್ರಮದ ಸಂಬAಧ ಈಗಾಗಲೇ ನಿಯೋಜಿಸಿದ ನೋಡಲ್ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ತಮಗೆ ವಹಿಸಿದ ಕಾರ್ಯಗಳನ್ನು ಆಯಾ ನೋಡಲ್ ಅಧಿಕಾರಿಗಳು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸೂಚನೆ ನೀಡಲಾಯಿತು.
ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದುಂಡಪ್ಪ ತುರಾದಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಜು ತಳವಾರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಗದೀಶ ಸೇರಿದಂತೆ ಇನ್ನೀತರರು ಇದ್ದರು.

ಸೆಪ್ಟೆಂಬರ್ 18ರಂದು ಕೊಪ್ಪಳದಲ್ಲಿ ಶ್ರೀ ವಿಶ್ವಕರ್ಮ ಜಯಂತಿ----ಕೊಪ್ಪಳ, ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ):ಕೊಪ್ಪಳ ಜಿಲ್ಲಾಡಳಿತದಿಂದ ಶ್ರೀ ...
13/09/2024

ಸೆಪ್ಟೆಂಬರ್ 18ರಂದು ಕೊಪ್ಪಳದಲ್ಲಿ ಶ್ರೀ ವಿಶ್ವಕರ್ಮ ಜಯಂತಿ
----
ಕೊಪ್ಪಳ, ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ):
ಕೊಪ್ಪಳ ಜಿಲ್ಲಾಡಳಿತದಿಂದ ಶ್ರೀ ವಿಶ್ವಕರ್ಮ ಜಯಂತಿಯನ್ನು ಸೆಪ್ಟೆಂಬರ್ 18ರಂದು ಬೆಳಿಗ್ಗೆ 11ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ ತುಂಗಭದ್ರ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಿದ (ಕಾಡಾ) ಅಧ್ಯಕ್ಷರಾದ ಹಸನ್ ಸಾಬ್ ನಬೀಬ್ ಸಾಬ್ ದೋಟಿಹಾಳ, ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಬೆಂಗಳೂರು ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್ ಅವರು ಭಾಗವಹಿಸುವರು. ಕಾರ್ಯಕ್ರಮದ ಅಂಗವಾಗಿ ಹೀರೆಸಿಂದೋಗಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ವೀರಶೇಖರ ಬಿ ಪತ್ತಾರ ಅವರು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್ ಅರಿಸಿದ್ದಿ ಅವರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ--ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಿ: ನಲಿನ್ ಅತುಲ್----ಕೊಪ್ಪಳ, ಸೆಪ್ಟೆಂಬರ್ 12 (ಕರ್ನಾಟಕ ವಾರ್...
13/09/2024

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ
--
ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಿ: ನಲಿನ್ ಅತುಲ್
----
ಕೊಪ್ಪಳ, ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಮಾನವ ಸರಪಳಿಯ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸುವಂತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮ ನಿಮಿತ್ತ ಜಿಲ್ಲಾ ಪಂಚಾಯತ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸೆಪ್ಟೆಂಬರ್ 12ರಂದು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಯ ಅಧಿಕಾರಿಗಳು, ಮತ್ತು ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರು ಹಾಗೂ ಇತರ ಜನಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೆ.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಕೊಪ್ಪಳ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಮಾನವ ಸರಪಳಿ ಕಾರ್ಯಕ್ರಮ ಹಾದುಹೋಗುವ ಗ್ರಾಮ ಪಂಚಾಯತಿ, ನಗರ ಪ್ರದೇಶದ ಎಲ್ಲ ಪ್ರಾಥಮಿಕ ಶಾಲೆಗಳ 06 ರಿಂದ 10ನೇ ತರಗತಿ, ಪಿಯುಸಿ, ಪದವಿ ವಿದ್ಯಾರ್ಥಿಗಳು, ಗ್ರಾಮ ಪಂಚಾಯತಿ ಮತ್ತು ನಗರಸಭೆ ಪಟ್ಟಣ ಪಂಚಾಯತಿ ಚನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯತಿಯ ಮಹಿಳಾ ಒಕ್ಕೂಟದ ಸದಸ್ಯರು, ನಗರ ಪ್ರದೇಶದ ವಿವಿಧ ಮಹಿಳಾ ಒಕ್ಕೂಟದ ಸದಸ್ಯರು, ನರೇಗಾ ಕೂಲಿಕಾರರು, ಸಹಕಾರ ಸಂಘಗಳ ಸದಸ್ಯರು, ಮತ್ತು ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು, ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳು, ಜಿಲ್ಲೆಯ ಎಲ್ಲ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸರ್ವ ಸಿಬ್ಬಂದಿ ಸಾರ್ವಜನಿಕರು, ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತೀರುವ ಕಾರ್ಮಿಕರು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಯ ಅಧಿಕಾರಿಗಳು, ಮತ್ತು ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರು ಹಾಗೂ ಇತರ ಜನಪ್ರತಿನಿಧಿಗಳು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಕೊಪ್ಪಳ ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಸೇರಿದಂತೆ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಸರ್ವ ಸದಸ್ಯರಗಳು ಹಾಗೂ ವಿವಿಧ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.

ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ----ಕೊಪ್ಪಳ ಸೆಪ್ಟೆಂಬರ್ 12 (ಕರ್ನಾಟಕ ವಾರ್ತ...
13/09/2024

ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ
----
ಕೊಪ್ಪಳ ಸೆಪ್ಟೆಂಬರ್ 12 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳ ಬಳಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಇತರೆ ವಿಷಯಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 11ರಂದು ಸಭೆ ನಡೆಸಲಾಯಿತು.
ಇದೇ ವೇಳೆ ಜಿಲ್ಲಾಧಿಕಾರಿಗಳು ಮಾತನಾಡಿ, ಕೊಪ್ಪಳ ಜಿಲ್ಲೆಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿ, ಹುಲಿಗೆಮ್ಮ ದೇವಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ,ಕೇಂದ್ರ ಮತ್ತು ರಾಜ್ಯ ಪುರಾತತ್ವ ಇಲಾಖೆ ಅಧೀನದಲ್ಲಿರುವ ಸ್ಮಾರಕಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ಧಿಪಡಿಸಿ ವಿವಿಧ ರಾಜ್ಯಗಳ ಹಾಗೂ ಸ್ಥಳೀಯ ಪ್ರವಾಸಿಗರನ್ನು ಆಕರ್ಷಿಸಲು ಅಗತ್ಯ ಕ್ರಮ ವಹಿಸುವಂತೆ ಭಾಗವಹಿಸಿದ್ದ ಅಧಿಕಾರಿಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳು ಸೂಚಿಸಿದರು. ಕೊಪ್ಪಳ ನಗರದ ಹುಲಿಕೆರೆ ಅಭಿವೃದ್ಧಿ ಸಾಣಾಪುರ ಕೆರೆ ಭಾಗದಲ್ಲಿ ವಾಟರ್ ಸ್ಪೋರ್ಟ್ಸ್ ಅಡ್ವೆಂಚರ್ಸ್ ರಾಕ್ ಕ್ಲೈಂಬಿಂಗ್ ಹಾಗೂ ಏಕೊ ಟೂರಿಸಂ ಮುಂತಾದ ಪ್ರವಾಸಿ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಹಾಗೂ ಕೊಪ್ಪಳ ಬ್ರಾಂಡ್ ಯೋಜನೆ ಅಡಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಈಗಾಗಲೇ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ (ಎನ್ಐಸಿ ) ಕೊಪ್ಪಳ ರವರು ಕೊಪ್ಪಳ ಬ್ರಾಂಡ್ ವೆಬ್ಸೈಟ್ ತಯಾರಿಸಲಾಗಿದ್ದು ಕೊಪ್ಪಳ ಜಿಲ್ಲೆಯ ಪ್ರವಾಸಿ ತಾಣಗಳನ್ನು ಸಾರ್ವಜನಿಕರಿಗೆ ಪ್ರಚಾರಪಡಿಸಲು ಜಿಲ್ಲೆಯ ಪ್ರವಾಸಿ ತಾಣಗಳ ಮಾಹಿತಿಯೊಂದಿಗೆ ಛಾಯಾಚಿತ್ರ ಹಾಗೂ ವೀಡಿಯೊಗಳನ್ನ ಕೊಪ್ಪಳ ಬ್ರಾಂಡ್ ವೆಬ್‌ಸೈಟ್‌ನಲ್ಲಿ ಅಳವಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಆನೆಗೊಂದಿ ಉತ್ಸವ ನಡೆಯುವ ಪ್ರದೇಶದಲ್ಲಿರುವ ಸರ್ಕಾರಿ ಭೂಮಿಯ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಗಂಗಾವತಿ ತಹಶಿಲ್ದಾರರು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಗಂಗಾವತಿ ಹಾಗೂ ಕನಕಗಿರಿ ತಾಲ್ಲೂಕುಗಳು ಸೇರಿದಂತೆ ಇನ್ನಿತರ ಜಮೀನಿನ ಸಮಸ್ಯೆಗಳಿದ್ದಲ್ಲಿ ಶೀಘ್ರವಾಗಿ ಇತ್ಯರ್ಥಗೊಳಿಸಲು ಆಯಾ ತಹಶಿಲ್ದಾರರು ಕ್ರಮ ವಹಿಸಬೇಕು. ಶೀಘ್ರವಾಗಿ ಕಾಮಗಳನ್ನು ಪೂರ್ಣಗಳಿಸುವಂತೆ ಕೆ.ಆರ್.ಐ.ಡಿ.ಎಲ್ ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಕೊಪ್ಪಳ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾವ್ಯ ಚತುರ್ವೇದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಹೇಮಂತ್ ಕುಮಾರ್, ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪಾಧಿಕಾರದ ಆಯುಕ್ತರಾದ ಕೆ.ರಂಗನಾಥ, ಕೊಪ್ಪಳ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಡಿ.ನಾಗರಾಜ ಸೇರಿದಂತೆ, ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶಿಲ್ದಾರರು, ಕಂದಾಯ ನಿರೀಕ್ಷಕರು ಹಾಗೂ ಕಾಮಗಾರಿಗಳ ಅನುಷ್ಠಾನ ಏಜೆನ್ಸಿಯವರು ಉಪಸ್ಥಿತರಿದ್ದರು.

Address

District Administration Koppal
Koppal
583231

Alerts

Be the first to know and let us send you an email when District Administration Koppal posts news and promotions. Your email address will not be used for any other purpose, and you can unsubscribe at any time.

Share