18/07/2026
ಇಂದು ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕ್ ಪಂಚಾಯತ್ ಮುಧೋಳ ಅವರು ಆರ್ಎಮ್ಜಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ಮುಧೋಳ 2027- 28ನೇ ಸಾಲಿನ ಎನ್ಎಸ್ಎಸ್ ಮತ್ತು ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ಮಹಾ ವಿದ್ಯಾಲಯದ ವಿದ್ಯಾರ್ಥಿನಿಯರಿಗೆ ತಮ್ಮಲ್ಲಿರುವ ಪ್ರತಿಭೆಯನ್ನು ತೋರಿಸಲು ಇದು ಉತ್ತಮವಾದ ವೇದಿಕೆ ಎಲ್ಲರೂ ಈ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರಂಭವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಲಹೆ ನೀಡಿದರು.