21/06/2026
ಇಂದು Yallappa Hegade ಅವರ ನೇತೃತ್ವದಲ್ಲಿ #ಬೆಳ್ಳಿಖಂಡಿ ಗ್ರಾಮದಲ್ಲಿ ಪೂರ್ವಭಾವಿ ಸಭೆ
ಕರ್ನಾಟಕ ರಾಜ್ಯ ರೈತ ಸಂಘ (ರಿ) ಕೆರೂರ ಘಟಕದ ವತಿಯಿಂದ, ರಾಜ್ಯದಲ್ಲಿರುವ ವಿದ್ಯುತ್ ಸರಬರಾಜು ಕಂಪನಿಗಳನ್ನು TATA Power ಕಂಪನಿಗೆ ಖಾಸಗೀಕರಣಗೊಳಿಸುವ ರಾಜ್ಯ ಸರ್ಕಾರದ ಧೋರಣೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆಯ ಕುರಿತು ಶ್ರೀ ಯಲ್ಲಪ್ಪ ಹೆಗಡೆ ಅವರ ನೇತೃತ್ವದಲ್ಲಿ ಬೀಳಗಿ ವಿಧಾನಸಭಾ ಕ್ಷೇತ್ರದ ಬೆಳ್ಳಿಖಂಡಿ ಗ್ರಾಮದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಸಭೆಯಲ್ಲಿ ರೈತರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ವಿದ್ಯುತ್ ಕ್ಷೇತ್ರದ ಖಾಸಗೀಕರಣದಿಂದ ರೈತರು ಮತ್ತು ಸಾಮಾನ್ಯ ಜನರ ಹಿತಾಸಕ್ತಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು. ಆದ್ದರಿಂದ ಈ ನಿರ್ಧಾರವನ್ನು ವಿರೋಧಿಸಿ ನಡೆಯುವ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರೆ ನೀಡಲಾಯಿತು.
📍 ಸ್ಥಳ: ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮಿತ, ಕೆರೂರ ಕಚೇರಿ ಮುಂಭಾಗ
📅 ದಿನಾಂಕ: 22-06-2026, ಸೋಮವಾರ
🕙 ಸಮಯ: ಬೆಳಿಗ್ಗೆ 10 ಗಂಟೆಗೆ
ರೈತರ ಹಕ್ಕುಗಳ ರಕ್ಷಣೆಗಾಗಿ ಎಲ್ಲರೂ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸೋಣ! ✊🌾⚡