18/01/2026
ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಟಿ.ನರಸೀಪುರ ತಾಲ್ಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಿದ್ದ, "ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ Siddaramaiah ಅವರು ನೆರವೇರಿಸಿದರು.
ಸಚಿವರಾದ ಡಾ||ಹೆಚ್.ಸಿ.ಮಹದೇವಪ್ಪ, ಡಾ||ಶರಣಪ್ರಕಾಶ್ ಪಾಟೀಲ್, ಡಾ||ಎಂ.ಸಿ.ಸುಧಾಕರ್, ಸಂಸದರಾದ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಡಾ||ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು, ವರುಣಾ ವಿಧಾನಸಭಾ ಕ್ಷೇತ್ರದ ಮುಖಂಡರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.