Campus Front Of India - Puttur

Campus Front Of India - Puttur OFFICIAL page Of Campus Front Of India - Puttur District.

ಸುಳ್ಯ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ; ಕಲಂ 307 ಅಡಿಯಲ್ಲಿ ಪ್ರಕರಣ ದಾಖಲಿಸಲು ಕ್ಯಾಂಪಸ್ ಫ್ರಂಟ್ ಡಿವೈಎಸ್ಪಿಗೆ ಮನವಿಪುತ್ತೂರು :- ಸುಳ್ಯ ತಾಲೂ...
01/09/2022

ಸುಳ್ಯ ವಿದ್ಯಾರ್ಥಿಗೆ ಹಲ್ಲೆ ಪ್ರಕರಣ; ಕಲಂ 307 ಅಡಿಯಲ್ಲಿ ಪ್ರಕರಣ ದಾಖಲಿಸಲು ಕ್ಯಾಂಪಸ್ ಫ್ರಂಟ್ ಡಿವೈಎಸ್ಪಿಗೆ ಮನವಿ

ಪುತ್ತೂರು :- ಸುಳ್ಯ ತಾಲೂಕಿನ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಮುಹಮ್ಮದ್ ಸನೀಫ್ ರವರನ್ನು ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಮಾತನಾಡಿದ್ದಾನೆ ಎಂದು ಆರೋಪಿಸಿ ಕ್ರೂರವಾಗಿ ಥಳಿಸಿ, ಕೊಲೆಯತ್ನ ನಡೆಸಿದ ಘಟನೆ ನಡೆದಿದ್ದು, ಬಂಧಿಸಿರುವ ಆರೋಪಿಗಳ ಮೇಲೆ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿಯು ಪುತ್ತೂರು ಡಿವೈಎಸ್ಪಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

ಸನೀಫ್ ನೀಡಿದ ದೂರಿನ ಅನ್ವಯ ಆರೋಪಿಗಳ ವಿರುದ್ಧ ಐಪಿಸಿ ಕಲಂ 143,147,148,323,324,506 ಹಾಗೂ 149 ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮುಂದೆ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ವಿದ್ಯಾರ್ಥಿಗೆ ಜೀವ ಬೆದರಿಕೆ ಹಾಕಿದ್ದು ಮಾತ್ರವಲ್ಲದೆ ಕೊಲೆಯತ್ನ ನಡೆಸಿದ ಎಬಿವಿಪಿ ಗೂಂಡಾಗಳ ಮೇಲೆ ಕಲಂ 307 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಇಂತಹಾ ಅನಾಹುತಗಳಿಗೆ ಇದು ಎಡೆಮಾಡಿಕೊಡಬಹುದು. ಆದ್ದರಿಂದ ಇಲಾಖೆಯು ಇದನ್ನು ಗಂಭೀರವಾಗಿ ಪರಿಗಣಿಸಿ ಬಂಧಿತ ಆರೋಪಿಗಳ ಮೇಲೆ ಸೆಕ್ಷನ್ 307 ಅಡಿಯಲ್ಲಿ ಕೇಸು ದಾಖಲಿಸಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ನಿಯೋಗದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ, ಜಿಲ್ಲಾ ಸಮಿತಿ ಸದಸ್ಯರಾದ ಅಫ್ರೀದ್ ಹಾಗೂ ಅಫ್ರಾಝ್ ಇದ್ದರು.

ಹೆಡ್ಗೆವಾರ್ ಭಾಷಣವನ್ನು ಪಠ್ಯ ಪುಸ್ತಕದಿಂದ ಹಿಂಪಡೆಯುವಂತೆ ಆಗ್ರಹಿಸಿ ಸಿಎಫ್‌ಐ ಪುತ್ತೂರು ವತಿಯಿಂದ ನಡೆದ ಪ್ರತಿಭಟನೆಯ ಪತ್ರಿಕಾ ವರದಿಗಳು
28/05/2022

ಹೆಡ್ಗೆವಾರ್ ಭಾಷಣವನ್ನು ಪಠ್ಯ ಪುಸ್ತಕದಿಂದ ಹಿಂಪಡೆಯುವಂತೆ ಆಗ್ರಹಿಸಿ ಸಿಎಫ್‌ಐ ಪುತ್ತೂರು ವತಿಯಿಂದ ನಡೆದ ಪ್ರತಿಭಟನೆಯ ಪತ್ರಿಕಾ ವರದಿಗಳು

ದೇಶದ್ರೋಹಿ ಹೆಡ್ಗೇವಾರ್ ಭಾಷಣವನ್ನು ಪಠ್ಯ ಪುಸ್ತಕದಿಂದ ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆದಿನಾಂಕ:- 26/05/22ಸಮಯ:- ಸಂಜೆ 4.00ಗಂಟೆ...
25/05/2022

ದೇಶದ್ರೋಹಿ ಹೆಡ್ಗೇವಾರ್ ಭಾಷಣವನ್ನು ಪಠ್ಯ ಪುಸ್ತಕದಿಂದ ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

ದಿನಾಂಕ:- 26/05/22

ಸಮಯ:- ಸಂಜೆ 4.00ಗಂಟೆಗೆ

ಸ್ಥಳ:- ಪುತ್ತೂರು

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ -ಪುತ್ತೂರು_

ಪುತ್ತೂರು : ಸರಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳ ಕೊರತೆ : ಕ್ಯಾಂಪಸ್ ಫ್ರಂಟ್ ನಿಯೋಗದಿಂದ ಕ್ಷೇತ್ರ ಶಿಕ್ಷಣಾಧಿಕಾರಿಯ ಭೇಟಿಪುತ್ತೂರು ತಾಲೂಕಿ...
19/05/2022

ಪುತ್ತೂರು : ಸರಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳ ಕೊರತೆ : ಕ್ಯಾಂಪಸ್ ಫ್ರಂಟ್ ನಿಯೋಗದಿಂದ ಕ್ಷೇತ್ರ ಶಿಕ್ಷಣಾಧಿಕಾರಿಯ ಭೇಟಿ

ಪುತ್ತೂರು ತಾಲೂಕಿನಲ್ಲಿ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಯು ಎದ್ದು ಕಾಣುತ್ತಿದ್ದು, ಇದನ್ನು ಶೀಘ್ರವಾಗಿ ಸರಿಪಡಿಸುವಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ನಿಯೋಗವು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಚರ್ಚಿಸಿತು.

ಪುತ್ತೂರು ತಾಲೂಕಿನಲ್ಲಿರುವ 353 ಶಾಲಾ ಕೊಠಡಿಗಳು ಅಪಾಯದಲ್ಲಿದೆ ಹಾಗೂ
ಇಡೀ ತಾಲೂಕಿನ ಶಾಲೆಗಳ ಆಡಳಿತ ನೋಡಿಕೊಳ್ಳುವ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಟ್ಟಡವೇ ಬಿರುಕು ಬಿಟ್ಟು ಅಪಾಯದಲ್ಲಿದೆ. ಇದು 88 ವರ್ಷಗಳಷ್ಟು ಹಳೆಯದಾದ ಕಟ್ಟಡವಾಗಿದ್ದು, ಹೊಸ ಕಟ್ಟಡಕ್ಕೆ ಸರಕಾರ ಅನುದಾನ ಬಿಡುಗಡೆ ಮಾಡಬೇಕಾಗಿದೆ.

ನಿಯೋಗದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ನಾಯಕರಾದ ಫಯಾಜ್ ಕಲ್ಲಡ್ಕ , ಪುತ್ತೂರು ಜಿಲ್ಲಾ ಅಧ್ಯಕ್ಷರಾದ ಆರೀಫ್, ಕಾರ್ಯದರ್ಶಿ ಫಾರೂಕ್, ಸದಸ್ಯರಾದ ರಾಯಿಝ್ ಉಪಸ್ಥಿತರಿದ್ದರು.

ಸಂತಾಪಕಳೆದ ಮೂರು ದಿನಗಳ ಹಿಂದೆ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆತ್ಮೀಯ ಸಹೋದರ ಕ್ಯಾಂಪ...
07/05/2022

ಸಂತಾಪ

ಕಳೆದ ಮೂರು ದಿನಗಳ ಹಿಂದೆ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆತ್ಮೀಯ ಸಹೋದರ ಕ್ಯಾಂಪಸ್ ಫ್ರಂಟ್ ಕಲ್ಲರ್ಪೆ ಘಟಕದ ಜೊತೆ ಕಾರ್ಯದರ್ಶಿ ಮಹಮ್ಮದ್ ಹಾಶಿರ್ ಕಲ್ಲರ್ಪೆ ಇವರ ಮರಣವು ಅತೀವ ನೋವನ್ನು ಉಂಟು ಮಾಡಿದೆ. ಅಲ್ಲಾಹು ಪಾರತ್ರಿಕ ಜೀವನವನ್ನು ಯಶಸ್ವಿಗೊಳಿಸಲಿ ಹಾಗೂ ಕುಟುಂಬಕ್ಕೆ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತಿದ್ದೇವೆ.

ಮಹಮ್ಮದ್ ಆರೀಫ್
ಅಧ್ಯಕ್ಷರು, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಪುತ್ತೂರು

Campus Front of India Puttur District organised Protest Demonstration by Solidarity With Karnataka Students in UkraineRI...
01/03/2022

Campus Front of India Puttur District organised Protest Demonstration by Solidarity With Karnataka Students in Ukraine

RIP Naveen

ಸೂರ್ಯ ನಮಸ್ಕಾರವನ್ನು ಕಡ್ಡಾಯಗೊಳಿಸಿರುವ ಸರ್ಕಾರದ ವಿರುದ್ಧ ಕ್ಯಾಂಪಸ್ ಫ್ರಂಟ್ ನಿಂದ ಭಿತ್ತಿಪತ್ರ ಪ್ರದರ್ಶನಹಿಂದುತ್ವದ ಭಾಗವಾಗಿರುವ ಸೂರ್ಯ ನಮ...
26/01/2022

ಸೂರ್ಯ ನಮಸ್ಕಾರವನ್ನು ಕಡ್ಡಾಯಗೊಳಿಸಿರುವ ಸರ್ಕಾರದ ವಿರುದ್ಧ ಕ್ಯಾಂಪಸ್ ಫ್ರಂಟ್ ನಿಂದ ಭಿತ್ತಿಪತ್ರ ಪ್ರದರ್ಶನ

ಹಿಂದುತ್ವದ ಭಾಗವಾಗಿರುವ ಸೂರ್ಯ ನಮಸ್ಕಾರವನ್ನು ಬಹಿಷ್ಕರಿಸಿ ಗಣರಾಜ್ಯೋತ್ಸವವನ್ನು ಅರ್ಥಪೂರ್ಣಗೊಳಿಸೋಣ ಎಂಬ ಘೋಷಣೆಯೊಂದಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ವತಿಯಿಂದ ಕೊಡಿಪ್ಪಾಡಿ, ಸಂಟ್ಯಾರ್ ಯುನಿಟ್ ವತಿಯಿಂದ ಭಿತ್ತಿಪತ್ರ ಪ್ರದರ್ಶನ ನಡೆಯಿತು.

ಕ್ಯಾಂಪಸ್ ಫ್ರಂಟ್ ಪುತ್ತೂರು

ಪುತ್ತೂರು : 73 ನೇ ಗಣರಾಜ್ಯೋತ್ಸವದ ಪ್ರಯುಕ್ತ ಕ್ಯಾಂಪಸ್ ಫ್ರಂಟ್ ನಿಂದ ಧ್ವಜಾರೋಹಣ ಕಾರ್ಯಕ್ರಮಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು, ಪುರ...
26/01/2022

ಪುತ್ತೂರು : 73 ನೇ ಗಣರಾಜ್ಯೋತ್ಸವದ ಪ್ರಯುಕ್ತ ಕ್ಯಾಂಪಸ್ ಫ್ರಂಟ್ ನಿಂದ ಧ್ವಜಾರೋಹಣ ಕಾರ್ಯಕ್ರಮ

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು, ಪುರುಷರಕಟ್ಟೆ ಘಟಕ ಇದರ ವತಿಯಿಂದ 73 ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು.

ಧ್ವಜಾರೋಹಣ ನೆರವೇರಿಸಿ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸಾದಿಕ್ ಜಾರತ್ತಾರ್ ಮಾತನಾಡಿ ದೇಶದ ಸಂವಿಧಾನ ಜನರಿಗೆ ನೀಡಿರುವ ಹಕ್ಕುಗಳನ್ನು ಆಳುವ ಸರ್ಕಾರಗಳು ಕಸಿಯುತ್ತಿವೆ ಮತ್ತು ಜನ ವಿರೋಧಿ ನೀತಿಗಳನ್ನು ಜಾರಿಗೆ ತರಲಾಗುತ್ತಿದೆ. NEP ಯ ಮುಖಾಂತರ ಫ್ಯಾಶಿಷ್ಟ್ ಸಿದ್ದಾಂತವನ್ನು ಹೇರುತ್ತಿದ್ದಾರೆ‌. ಸಂಪತ್ತನ್ನು ಒಂದು ಕಡೆ ಕ್ರೋಡೀಕರಿಸಲಾಗುತ್ತಿದೆ. ಹತ್ರಾಸ್ ಕುಟುಂಬಕ್ಕೆ ಸಂತ್ವಾನ ಹೇಳಲು ಹೋದ ಕ್ಯಾಂಪಸ್ ಫ್ರಂಟ್ ನಾಯಕರನ್ನು ಕೇಂದ್ರ ಮತ್ತು ಯೋಗಿಯ ಸರಕಾರ ಯುಎಪಿಯ ಹಾಕಿ ಬಂಧಿಸಿತು. ಇದೆಲ್ಲವೂ ಸರ್ವಾಧಿಕಾರ ಸರ್ಕಾರದ ಲಕ್ಷಣಗಳಾಗಿದ್ದು, ಇದನ್ನು ತಡೆಯಲು ವಿದ್ಯಾರ್ಥಿ ಸಮೂಹ ಮುಂದೆ ಬರಬೇಕಾಗಿದೆ ಎಂದರು.

ಈ ಸಂಧರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಮುಖಂಡ ಅಫ್ರೀದ್ ಕೂರ್ನಡ್ಕ, ಯೂನಿಟ್ ನಾಯಕರು, ಸದಸ್ಯರು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುರುಷರಕಟ್ಟೆ ಘಟಕಇದರ ವತಿಯಿಂದ73 ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮಮುಖ್ಯ ಅತಿಥಿಸಾದಿಕ್ ಜ...
26/01/2022

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುರುಷರಕಟ್ಟೆ ಘಟಕ

ಇದರ ವತಿಯಿಂದ

73 ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ

ಮುಖ್ಯ ಅತಿಥಿ

ಸಾದಿಕ್ ಜಾರತ್ತಾರ್‌
ರಾಜ್ಯ ಕಾರ್ಯದರ್ಶಿ, ಕ್ಯಾಂಪಸ್ ಫ್ರಂಟ್ ಆಫ ಇಂಡಿಯಾ ಕರ್ನಾಟಕ

ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ - ಪುತ್ತೂರು

ಅತಿಥಿ ಉಪನ್ಯಾಸಕರೊಂದಿಗೆ ವಿದ್ಯಾರ್ಥಿಗಳು ; ಕ್ಯಾಂಪಸ್ ಫ್ರಂಟ್ ಪುತ್ತೂರು ವತಿಯಿಂದ ತಹಶೀಲ್ದಾರ್ ಗೆ ಮನವಿಪುತ್ತೂರು :- ರಾಜ್ಯದಲ್ಲಿ ಹಲವಾರು ವ...
29/12/2021

ಅತಿಥಿ ಉಪನ್ಯಾಸಕರೊಂದಿಗೆ ವಿದ್ಯಾರ್ಥಿಗಳು ; ಕ್ಯಾಂಪಸ್ ಫ್ರಂಟ್ ಪುತ್ತೂರು ವತಿಯಿಂದ ತಹಶೀಲ್ದಾರ್ ಗೆ ಮನವಿ

ಪುತ್ತೂರು :- ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಅತಿಥಿ ಉಪನ್ಯಾಸಕರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಸರಕಾರ ಅವರ ಬೇಡಿಕೆಗಳನ್ನು ಈಡೇರಿಸದೇ ಚೆಲ್ಲಾಟವಾಡುತ್ತಿದೆ. ರಾಜ್ಯದಲ್ಲಿ ಸುಮಾರು 14,447 ಅತಿಥಿ ಶಿಕ್ಷಕರಿದ್ದಾರೆ. ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಅರೆಕಾಲಿಕವಾಗಿ ಅಲ್ಪವೇತನ ಪಡೆದುಕೊಂಡು ಸಮಾಜದಲ್ಲಿ ಸ್ವಾಭಾಮಾನದ ಬದುಕನ್ನು ಕಟ್ಟಿಕೊಂಡಿದ್ದಾರೆ. ಇವರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ತಹಶಿಲ್ದಾರರಿಗೆ ಮನವಿಯನ್ನು ಸಲ್ಲಿಸಲಾಯಿತು.

ಅಥಿತಿ ಶಿಕ್ಷಕರಿಗೆ ಉದ್ಯೋಗದಲ್ಲಿ ಯಾವುದೇ ಭಧ್ರತೆಯಾಗಲಿ, ಪಿಎಫ್ ಇಎಸ್ಐ ಸಹಿತ ಯಾವುದೇ ಸೌಲಭ್ಯಗಳಿಲ್ಲದೆ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಬೀದಿಗೆ ಬರುವಂತಾಗಿದೆ. ಕಳೆದ ಲಾಕ್‌ಡೌನ್ ಸಂದರ್ಭದಲ್ಲಿ 163 ಅತಿಥಿ ಶಿಕ್ಷಕರು ಪ್ರಾಣ ಕಳೆದುಕೊಂಡಿದ್ದಾರೆಂದು ವರದಿಯಾಗಿದೆ. ಅದರಲ್ಲಿ ಕೆಲವರು ಮನೆಯ ಆರ್ಥಿಕ ಸಂಕಷ್ಟದಿಂದ ಕಂಗೆಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಸರಿಯಾದ ಚಿಕಿತ್ಸೆ ಪಡೆಯಲು ಹಣವಿಲ್ಲದೆ ಪ್ರಾಣ ಕಳೆದುಕೊಂಡಿದ್ದಾರೆ. ಅವರಿಗೆ ಯಾವುದೇ ಪರಿಹಾರ ಧನವಾಗಲಿ ಕನಿಷ್ಟ ಪಕ್ಷ ಸಾಂತ್ವನವಾಗಲಿ ದೊರಕಲಿಲ್ಲ.ಸಮಾಜವನ್ನು ಶೈಕ್ಷಣಿಕವಾಗಿ ಕಟ್ಟಿಬೆಳೆಸುವಲ್ಲಿ ಮಹತ್ತರವಾದ ಪಾತ್ರ ನಿರ್ವಹಿಸುವ ಅತಿಥಿ ಉಪನ್ಯಾಸಕರನ್ನು ತಕ್ಷಣ ಖಾಯಂಗೊಳಿಸಬೇಕು. ಉದ್ಯೋಗ ಭಧ್ರತೆಯೊಂದಿಗೆ ಪಿಎಫ್, ಇಎಸ್ಐ ನೀಡಬೇಕು. ಗೌರವಧನ ಹೆಚ್ಚಿಸಬೇಕು. ಬಾಕಿ ಇರುವ ಗೌರವಧನವನ್ನು ತಕ್ಷಣ ಮಂಜೂರುಗೊಳಿಸಬೇಕು. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪರಿಹಾರ ಧನ ನೀಡಬೇಕೆಂದು ಮನವಿಯಲ್ಲಿ ಆಗ್ರಹಿಸಲಾಯಿತು.

ನಿಯೋಗದಲ್ಲಿ ಕ್ಯಾಂಪಸ್ ಫ್ರಂಟ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಮುಸ್ತಫಾ ಕೊಡಿಪ್ಪಾಡಿ, ಸಮಿತಿ ಸದಸ್ಯರಾದ ಫಾರೂಕ್ ಕಟ್ಟತ್ತಾರ್, ಮುನೀರ್ ಪಾತ್ರಕೋಡಿ ಉಪಸ್ಥಿತರಿದ್ದರು.

Athualla PunjalakatteWedsNiyif Ashfi10.12.2021"May Allah help you and guides you two in this new phase of life. Praying ...
10/12/2021

Athualla Punjalakatte
Weds
Niyif Ashfi

10.12.2021

"May Allah help you and guides you two in this new phase of life. Praying for your happy life"

Best Wishes From

Campus Front of india - Puttur District

Address

Puttur Tq, Dk District
Puttur
574201

Website

Alerts

Be the first to know and let us send you an email when Campus Front Of India - Puttur posts news and promotions. Your email address will not be used for any other purpose, and you can unsubscribe at any time.

Share