Deputy Commissioner Raichur

Deputy Commissioner Raichur Deputy Commissioner Raichur

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ವೇಳಾಪಟ್ಟಿ ಪ್ರಕಟರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿವಿಧ ರಾಜಕ...
02/06/2026

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ವೇಳಾಪಟ್ಟಿ ಪ್ರಕಟ

ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ರವರು ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 (Special Intensive Revision - SIR) ಕುರಿತು ಮಾಹಿತಿ ನೀಡಿದರು.

ಪ್ರಮುಖ ದಿನಾಂಕಗಳು:
▪️ ಜೂನ್ 20 ರಿಂದ 29, 2026 – ಪೂರ್ವಸಿದ್ಧತೆ, ತರಬೇತಿ ಹಾಗೂ ದಾಖಲೆಗಳ ಮುದ್ರಣ
▪️ ಜೂನ್ 30 ರಿಂದ ಜುಲೈ 29, 2026 – ಬಿ.ಎಲ್.ಓ.ಗಳ ಮನೆ-ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹ
▪️ ಆಗಸ್ಟ್ 5, 2026 – ಕರಡು ಮತದಾರರ ಪಟ್ಟಿ ಪ್ರಕಟಣೆ
▪️ ಆಗಸ್ಟ್ 5 ರಿಂದ ಸೆಪ್ಟೆಂಬರ್ 4, 2026 – ಆಕ್ಷೇಪಣೆಗಳು ಮತ್ತು ಸಲಹೆಗಳ ಸ್ವೀಕಾರ
▪️ ಅಕ್ಟೋಬರ್ 3, 2026 ರೊಳಗೆ – ಆಕ್ಷೇಪಣೆಗಳ ವಿಲೇವಾರಿ
▪️ ಅಕ್ಟೋಬರ್ 7, 2026 – ಅಂತಿಮ ಮತದಾರರ ಪಟ್ಟಿ ಪ್ರಕಟಣೆ

ಅರ್ಹತಾ ದಿನಾಂಕ: 01.10.2026

ರಾಯಚೂರು ಜಿಲ್ಲೆಯ 07 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,853 ಮತಗಟ್ಟೆಗಳು ಇದ್ದು, ಸುಮಾರು 17,22,279 ಮತದಾರರು ದಾಖಲಾಗಿದ್ದಾರೆ. ಪ್ರತಿ ಮತಗಟ್ಟೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು (BLOs) ನಿಯೋಜಿಸಲಾಗಿದೆ.

ಎಲ್ಲಾ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಿ, ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಅಚ್ಚುಕಟ್ಟಾಗಿ ಮತ್ತು ಪಾರದರ್ಶಕವಾಗಿ ನಡೆಸುವಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಸೂಚಿಸಿದರು.

ಶಾಲಾ ಪ್ರಾರಂಭೋತ್ಸವ – ವಿದ್ಯಾರ್ಥಿಗಳ ಕಲಿಕೆಯಲ್ಲಿ ನಿರಂತರ ಪ್ರಯತ್ನ ಅಗತ್ಯ: ಜಿಲ್ಲಾಧಿಕಾರಿ ಶ್ರೀಮತಿ ಪೂವಿತಾ ಎಸ್.ರಾಯಚೂರು ನಗರದ ರೈಲ್ವೆ ಸ್...
01/06/2026

ಶಾಲಾ ಪ್ರಾರಂಭೋತ್ಸವ – ವಿದ್ಯಾರ್ಥಿಗಳ ಕಲಿಕೆಯಲ್ಲಿ ನಿರಂತರ ಪ್ರಯತ್ನ ಅಗತ್ಯ: ಜಿಲ್ಲಾಧಿಕಾರಿ ಶ್ರೀಮತಿ ಪೂವಿತಾ ಎಸ್.

ರಾಯಚೂರು ನಗರದ ರೈಲ್ವೆ ಸ್ಟೇಷನ್ ರಸ್ತೆಯ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆಯೋಜಿಸಲಾದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿಗಳನ್ನು ಹೊಂದಿ ಅವುಗಳನ್ನು ಸಾಧಿಸಲು ನಿರಂತರ ಕಲಿಕೆ ಮತ್ತು ಶ್ರಮ ಅಗತ್ಯ ಎಂದು ತಿಳಿಸಿದರು. ಶಿಕ್ಷಣದೊಂದಿಗೆ ಉತ್ತಮ ಮೌಲ್ಯಗಳು, ಸಂಸ್ಕಾರಗಳು ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ರೂಢಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವಿದ್ಯಾರ್ಥಿಗಳು IAS, IPS ಸೇರಿದಂತೆ ವಿವಿಧ ಉನ್ನತ ಹುದ್ದೆಗಳ ಕನಸು ಕಾಣಬೇಕು ಹಾಗೂ ಅದಕ್ಕಾಗಿ ಸತತ ಪ್ರಯತ್ನಿಸಬೇಕು ಎಂದು ಪ್ರೇರೇಪಿಸಿದರು. ಶಾಲಾ ತೊರೆಯುವಿಕೆ ತಡೆಯಲು ಶಿಕ್ಷಕರು ಮತ್ತು ಪೋಷಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯಲ್ಲಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ...
31/05/2026

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯಲ್ಲಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಪ್ರಗತಿಯನ್ನು ಸಮಗ್ರವಾಗಿ ಪರಿಶೀಲಿಸಲಾಯಿತು.

ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ಅಂಶಗಳು:

▪️ಎಲ್ಲಾ ವಾರ್ಡ್‌ಗಳಲ್ಲಿ ಘನ ತ್ಯಾಜ್ಯ ನಿರ್ವಹಣೆ ಮತ್ತು ಕಸ ಸಂಗ್ರಹಣೆಯ ಪರಿಣಾಮಕಾರಿ ಜಾರಿಗೆ ಸೂಚನೆ

▪️ಸಾರ್ವಜನಿಕ ಆರೋಗ್ಯ ಮತ್ತು ನಗರ ಸ್ವಚ್ಛತೆಗೆ ಆದ್ಯತೆ ನೀಡುವಂತೆ ನಿಯಮಿತ ಕಸ ಸಂಗ್ರಹಣೆಗೆ ನಿರ್ದೇಶನ

▪️ನಾಗರಿಕರಿಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರಿನ ನಿರಂತರ ಪೂರೈಕೆ ಕುರಿತು ವಿಶೇಷ ಚರ್ಚೆ

▪️ನೀರು ಸರಬರಾಜು ವ್ಯವಸ್ಥೆಯಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕಾ ಕ್ರಮಗಳ ಕೈಗೊಳ್ಳುವ ನಿರ್ದೇಶನ

▪️ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಸೂಚನೆ

ನಗರದ ಸಮಗ್ರ ಅಭಿವೃದ್ಧಿ, ಸ್ವಚ್ಛತೆ ಹಾಗೂ ಮೂಲಭೂತ ಸೌಕರ್ಯಗಳ ಸುಧಾರಣೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಜುಬೀನ್ ಮೋಹಪಾತ್ರ, ಆಯುಕ್ತರು, ಮಹಾನಗರ ಪಾಲಿಕೆ ರಾಯಚೂರು ಉಪಸ್ಥಿತರಿದ್ದರು.

ಸಾರ್ವಜನಿಕರ ಗಮನಕ್ಕೆಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್.ಪಿ.ಜಿ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾರ್ವಜನಿಕರು ಆತಂಕ ಪಡುವ ...
29/05/2026

ಸಾರ್ವಜನಿಕರ ಗಮನಕ್ಕೆ

ಜಿಲ್ಲೆಯಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಎಲ್.ಪಿ.ಜಿ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್., IAS. ರವರು ತಿಳಿಸಿದ್ದಾರೆ.

ನೂತನ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಅಧಿಕಾರಿಗಳು, ತೈಲ ಕಂಪನಿಗಳ ಪ್ರತಿನಿಧಿಗಳು ಹಾಗೂ ಪೆಟ್ರೋಲ್ ಬಂಕ್ ಮಾಲೀಕರೊಂದಿಗೆ ಸಭೆ ನಡೆಸಿ, ಜಿಲ್ಲೆಯಲ್ಲಿ ಇಂಧನ ಪೂರೈಕೆ ಸುಗಮವಾಗಿರುವಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

1️⃣ ರೈತರಿಗೆ ಉಳುಮೆ ಕಾರ್ಯಕ್ಕೆ ಯಾವುದೇ ತೊಂದರೆ ಆಗದಂತೆ ಇಂಧನ ಪೂರೈಕೆ
2️⃣ ನಿಗದಿತ ದರದಲ್ಲಿ ತೈಲ ಮಾರಾಟಕ್ಕೆ ಸೂಚನೆ
3️⃣ ಪ್ರತಿದಿನ ಇಂಧನ ಲಭ್ಯತೆ ಮಾಹಿತಿ ನೀಡಲು ಬಂಕ್ ಮಾಲೀಕರಿಗೆ ನಿರ್ದೇಶನ
4️⃣ ಗ್ರಾಹಕರ ಹಿತರಕ್ಷಣೆ ಹಾಗೂ ಸುರಕ್ಷತಾ ನಿಯಮಗಳ ಪಾಲನೆಗೆ ಒತ್ತು

ಜಿಲ್ಲೆಯಲ್ಲಿ ಇಂಧನದ ಸಮರ್ಪಕ ಲಭ್ಯತೆ ಇರುವುದಾಗಿ ತೈಲ ಕಂಪನಿಗಳ ಪ್ರತಿನಿಧಿಗಳು ಸಭೆಯಲ್ಲಿ ಸ್ಪಷ್ಟಪಡಿಸಿದರು.

27/05/2026

ಶ್ರೀಮತಿ ಪೂವಿತಾ ಎಸ್., IAS.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು
ರಾಯಚೂರು ಜಿಲ್ಲೆ
ಜಿಲ್ಲೆಯ ಸಾರ್ವಜನಿಕರಿಗೆ ವಿಶೇಷ ಸಂದೇಶ

ಮುಂಗಾರು ಹಂಗಾಮಿನ ಪೂರ್ವ ಸಿದ್ಧತಾ ಸಭೆ – ರೈತರಿಗೆ ಸಮರ್ಪಕ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಜಿಲ್ಲಾಡಳಿತ ಬದ್ಧರಾಯಚೂರು ಜಿಲ್ಲೆಯಲ್ಲ...
27/05/2026

ಮುಂಗಾರು ಹಂಗಾಮಿನ ಪೂರ್ವ ಸಿದ್ಧತಾ ಸಭೆ – ರೈತರಿಗೆ ಸಮರ್ಪಕ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಜಿಲ್ಲಾಡಳಿತ ಬದ್ಧ

ರಾಯಚೂರು ಜಿಲ್ಲೆಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಬೀಜ ಮತ್ತು ರಸಗೊಬ್ಬರ ಕಂಪನಿಗಳ ಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ನಡೆಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿಗಳು:
1️⃣ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಮರ್ಪಕವಾಗಿ ಲಭ್ಯವಾಗಬೇಕು
2️⃣ ಬೇಡಿಕೆ ಅನುಸಾರ ಮುಂಗಡ ಶೇಖರಣೆ ಮಾಡಬೇಕು
3️⃣ ಕಳಪೆ ಬೀಜ ಅಥವಾ ರಸಗೊಬ್ಬರ ವಿತರಣೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು
4️⃣ ರೈತ ಸಂಪರ್ಕ ಕೇಂದ್ರಗಳಲ್ಲಿ ಕೃಷಿ ಮಾಹಿತಿಯನ್ನು ಪರಿಣಾಮಕಾರಿಯಾಗಿ ನೀಡಬೇಕು
5️⃣ ಯೂರಿಯಾ ಹಾಗೂ ಇತರೆ ರಸಗೊಬ್ಬರಗಳ ವಿತರಣೆಯನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಬೇಕು ಎಂದು ಸೂಚಿಸಿದರು.

2026ರ ಜನವರಿ 1ರಿಂದ ಮೇ 26ರವರೆಗೆ ಜಿಲ್ಲೆಯಲ್ಲಿ 654 ಮಿ.ಮೀ ಮಳೆಯಾಗಿದ್ದು, ಮಸ್ಕಿ ತಾಲೂಕಿನಲ್ಲಿ ಅತಿ ಹೆಚ್ಚು ಹಾಗೂ ದೇವದುರ್ಗ ತಾಲೂಕಿನಲ್ಲಿ ಅತಿ ಕಡಿಮೆ ಮಳೆಯಾಗಿದೆ.

2026-27 ಮುಂಗಾರು ಹಂಗಾಮಿನ ಗುರಿ: • ಏಕದಳ ಧಾನ್ಯಗಳು – 2,18,861 ಹೆಕ್ಟೇರ್
• ದ್ವಿದಳ ಧಾನ್ಯಗಳು – 1,50,000 ಹೆಕ್ಟೇರ್
• ಎಣ್ಣೆಕಾಳು ಬೆಳೆಗಳು – 19,000 ಹೆಕ್ಟೇರ್
• ವಾಣಿಜ್ಯ ಬೆಳೆಗಳು – 1,86,954 ಹೆಕ್ಟೇರ್
➡️ ಒಟ್ಟು 5,87,350 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಗುರಿ ನಿಗದಿಪಡಿಸಲಾಗಿದೆ.

ರೈತರಿಗೆ ಯಾವುದೇ ತೊಂದರೆ ಆಗದಂತೆ ಬೀಜ ಮತ್ತು ರಸಗೊಬ್ಬರ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಲು ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಮೃತಪಟ್ಟ ಆರೋಗ್ಯ ಇಲಾಖೆಯ ಸರ್ಕಾರಿ ನೌಕರರಾದ ಶ್ರೀ ಅರುಣ ಕುಮಾರ್ ಅವರ ಕುಟುಂಬಕ್ಕೆ ಸರ್ಕಾರಿ ನೌಕರರ ವೇತನ ಪ್ಯಾಕೇಜ್ ಯೋಜನೆಯಡಿ ₹1 ಕೋಟಿ ಮೊತ್ತ...
26/05/2026

ಮೃತಪಟ್ಟ ಆರೋಗ್ಯ ಇಲಾಖೆಯ ಸರ್ಕಾರಿ ನೌಕರರಾದ ಶ್ರೀ ಅರುಣ ಕುಮಾರ್ ಅವರ ಕುಟುಂಬಕ್ಕೆ ಸರ್ಕಾರಿ ನೌಕರರ ವೇತನ ಪ್ಯಾಕೇಜ್ ಯೋಜನೆಯಡಿ ₹1 ಕೋಟಿ ಮೊತ್ತದ ಪರಿಹಾರ ಚೆಕ್ ಅನ್ನು ಇಂದು ಮಾನ್ಯ ಜಿಲ್ಲಾಧಿಕಾರಿಗಳವರು ವಿತರಿಸಿದರು.

ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ, ನೂತನ ಮಹಾನಗರ ಪಾಲಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಟುಂಬ ಸದಸ್ಯರಿಗೆ ಸಾಂತ್ವನ ಸೂಚಿಸಿದ ಜಿಲ್ಲಾಧಿಕಾರಿಗಳವರು, ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ಯೋಜನೆಗಳು ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುತ್ತವೆ ಎಂದು ತಿಳಿಸಿದರು.

ಮೃತ ನೌಕರರ ಸೇವೆಯನ್ನು ಸ್ಮರಿಸಿದ ಅವರು, ಸರ್ಕಾರ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘವು ಸದಾ ಕುಟುಂಬದೊಂದಿಗೆ ಇರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಜೊತೆಗೆ, ಎಲ್ಲಾ ಸರ್ಕಾರಿ ನೌಕರರು ವೇತನ ಪ್ಯಾಕೇಜ್ ಯೋಜನೆಯ ಸದುಪಯೋಗವನ್ನು ಪಡೆಯಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಜುಬೀನ್ ಮೋಹಪಾತ್ರ, ಆಯುಕ್ತರು, ಮಹಾನಗರ ಪಾಲಿಕೆ ರಾಯಚೂರು, ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಮುಂಗಾರು ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ, ಪ್ರವಾಹ ಹಾಗೂ ತುರ್ತು ಪರಿಸ್ಥಿತಿಗಳನ್ನು ...
25/05/2026

ಜಿಲ್ಲೆಯಲ್ಲಿ ಮುಂಗಾರು ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ, ಪ್ರವಾಹ ಹಾಗೂ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸಂಬಂಧಿಸಿದ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಶ್ರೀಮತಿ ಪೂವಿತಾ ಎಸ್. ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆವಹಿಸಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಅವರು ಮಾತನಾಡಿದರು.

1️⃣ಪ್ರಕೃತಿ ವಿಕೋಪದಿಂದ ಉಂಟಾಗುವ ಹಾನಿಗಳಿಗೆ ನಿಯಮಾನುಸಾರ ತಕ್ಷಣ ಪರಿಹಾರ ವಿತರಣೆ
2️⃣ ರೈತರಿಗೆ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕ ಪೂರೈಕೆ
3️⃣ ರಸಗೊಬ್ಬರ ಅಕ್ರಮ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ
4️⃣ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ
5️⃣ ಗ್ರಾಮೀಣ ಹಾಗೂ ನಗರ ಪ್ರದೇಶಗಳಿಗೆ ವಿಶೇಷ ಆದ್ಯತೆ
6️⃣ಜೆಸ್ಕಾಂ ಹಾಗೂ ಸಂಬಂಧಿತ ಇಲಾಖೆಗಳ ಸಮನ್ವಯದ ಮೂಲಕ ತ್ವರಿತ ಪರಿಹಾರ ಕ್ರಮ

ಲಿಂಗಸುಗೂರು, ದೇವದುರ್ಗ, ಮಾನ್ವಿ, ಸಿಂಧನೂರು, ಮಸ್ಕಿ, ಸಿರವಾರ ಹಾಗೂ ರಾಯಚೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಇಂದು ಜಿಲ್ಲಾಧಿಕಾರಿಗಳು, ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಸಮೀಕ್ಷಾ ಭಿತ್ತಿಪತ್...
21/05/2026

ಇಂದು ಜಿಲ್ಲಾಧಿಕಾರಿಗಳು, ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಸಮೀಕ್ಷಾ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು.

ಈ ಯೋಜನೆಯ ಉದ್ದೇಶವು ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಹಾಗೂ ಐತಿಹಾಸಿಕ ದಾಖಲೆಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯವನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದಾಗಿದೆ.

ಅಮೂಲ್ಯ ಹಸ್ತಪ್ರತಿಗಳ ಸಮೀಕ್ಷೆ, ಸಂರಕ್ಷಣೆ, ಡಿಜಿಟಲೀಕರಣ, ನೋಂದಣಿ, ಅನುವಾದ ಹಾಗೂ ಪ್ರಕಟಣೆ ಮೂಲಕ ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಭವಿಷ್ಯದ ಪೀಳಿಗೆಗೆ ಉಳಿಸಿ, ಒದಗಿಸುವುದು ಈ ಯೋಜನೆಯ ಮುಖ್ಯ ಧ್ಯೇಯವಾಗಿದೆ.

ಇಂದು ಜಿಲ್ಲಾಧಿಕಾರಿಗಳು ನಿರ್ಮಾಣ ಹಂತದಲ್ಲಿರುವ ರಾಯಚೂರು ವಿಮಾನ ನಿಲ್ದಾಣ ಯೋಜನಾ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿಯನ್ನು ಸ್ಥಳದಲ್ಲೇ ...
20/05/2026

ಇಂದು ಜಿಲ್ಲಾಧಿಕಾರಿಗಳು ನಿರ್ಮಾಣ ಹಂತದಲ್ಲಿರುವ ರಾಯಚೂರು ವಿಮಾನ ನಿಲ್ದಾಣ ಯೋಜನಾ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳ ಪ್ರಗತಿಯನ್ನು ಸ್ಥಳದಲ್ಲೇ ಪರಿಶೀಲಿಸಿದರು.

ಯೋಜನೆಗೆ ಸಂಬಂಧಿಸಿದ ಭೂ ಅಭಿವೃದ್ಧಿ, ರನ್‌ವೇ ನಿರ್ಮಾಣ, ಮೂಲಸೌಕರ್ಯ ಸೌಲಭ್ಯಗಳು ಹಾಗೂ ಇತರೆ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳು ಹಾಗೂ ಯೋಜನೆ ಕಾರ್ಯನಿರ್ವಹಣಾ ಸಿಬ್ಬಂದಿ ಉಪಸ್ಥಿತರಿದ್ದರು.

Address

Deputy Commissioner
Raichur
584101

Alerts

Be the first to know and let us send you an email when Deputy Commissioner Raichur posts news and promotions. Your email address will not be used for any other purpose, and you can unsubscribe at any time.

Contact The Organization

Send a message to Deputy Commissioner Raichur:

Share